December 22, 2024

Newsnap Kannada

The World at your finger tips!

revenue , lokayukta , Karnataka

ಮುಡಾ ಹಗರಣ : ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

Spread the love

ಮೈಸೂರು : ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ,ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರುನೀಡಿದ್ದಾರೆ.

ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಅಕ್ರಮದಲ್ಲಿ ಭಾಗಿಯಾಗಿದ್ದು , ಕೂಡಲೇ ಅಧಿಕಾರಿಗಳ ವಿರುದ್ಧ ಕ್ರಿಮಿನಲ್​​ ಕೇಸ್ ದಾಖಲಿ, ಅವರನ್ನು ಬಂಧಿಸಬೇಕು. ಈ ಸಂಬಂಧ ಭೂಸ್ವಾಧೀನ ಅಧಿಕಾರಿಗಳು, ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಅಕ್ರಮದಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಅಧಿಕಾರಿಗಳಿಂದಲೇ ಹಣ ವಸೂಲಿ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಕೂಡಲೇ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ ವರ್ಗದವರನ್ನು ಬಂಧಿಸಿ, ಸರ್ಕಾರಕ್ಕೆ ಆಗಿರುವ ನಷ್ಟವನ್ನು ಸದರಿ ಅಧಿಕಾರಿಗಳಿಂದಲೇ ಭರಿಸುವಂತೆ ಸೂಕ್ತ ಆದೇಶ ಹೊರಡಿಸಬೇಕೆಂದು ಬಿಜೆಪಿ ಶಾಸಕ ಶ್ರೀವತ್ಸ ಮನವಿ ಮಾಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!