April 13, 2025

Newsnap Kannada

The World at your finger tips!

WhatsApp Image 2024 09 30 at 5.40.57 PM

ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ

Spread the love

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ನನ್ನ ಹೋರಾಟವಲ್ಲ, ಅಲ್ಲಿ ನಡೆದಿರುವ ಎಲ್ಲಾ ಅಕ್ರಮಗಳ ವಿರುದ್ಧ ನನ್ನ ಹೋರಾಟ ನಡೆಸುತ್ತಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.

“ಯಾರೆಲ್ಲಾ 50:50 ನಿವೇಶನ ಪಡೆಯುವ ಅಕ್ರಮದಲ್ಲಿ ಶಾಮೀಲಾಗಿದ್ದಾರೋ, ಅವರ ವಿರುದ್ಧ ಸೂಕ್ತ ತನಿಖೆ ನಡೆಯಬೇಕು ಮತ್ತು ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ನನ್ನ ಆಶಯ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮುಡಾ ಹಗರಣದ ಬಗ್ಗೆ ದಾಖಲೆಗಳನ್ನು ಒದಗಿಸಿದ್ದು ಕಾಂಗ್ರೆಸ್ ನಾಯಕರೇ ಆಗಿದ್ದಾರೆ ಎಂಬ ಆಘಾತಕಾರಿ ವಿಚಾರವನ್ನು ಅವರು ಬಹಿರಂಗಪಡಿಸಿದರು.ಇದನ್ನು ಓದಿ –ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು

“ನೇರವಾಗಿ ಎದುರಾಗಿ ಹೋರಾಟ ಮಾಡಲು ಸಾಧ್ಯವಿಲ್ಲ ಎಂಬ ಕಾರಣದಿಂದ ಹಲವರು ನನ್ನ ಮೂಲಕ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಸ್ವತಃ ಹಗರಣದ ದಾಖಲೆಗಳನ್ನು ಒದಗಿಸಿದ್ದಾರೆ,” ಎಂದು ಅವರು ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!