ಮೂಡಾ ಹಗರಣ : ಸಿಎಂ ವಿರುದ್ಧ ತನಿಖೆಗೆ ಕೋರ್ಟ್ ಅಸ್ತು – ಸಿದ್ದುಗೆ ಸಂಕಷ್ಟ

Team Newsnap
1 Min Read
  • ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ
  • ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು
  • ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು ಸಿದ್ಧವಾಗಿರುವ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್‌, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿದೆ.

ಸಿಎಂ ಸಿದ್ದರಾಮಯ್ಯ ಪರ ಹಾಗೂ ದೂರುದಾರರ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್‌ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಮುಡಾ ಪ್ರಕರಣದಲ್ಲಿ ಅರ್ಜಿದಾರರ ಕ್ರಮ ಸೂಕ್ತವಾಗಿದೆ. ಹೀಗಾಗಿ ಗವರ್ನರ್ ಆದೇಶವನ್ನು ಹೈಕೋರ್ಟ್‌ ಒಪ್ಪಿಕೊಂಡಿದೆ.

ಹೈಕೋರ್ಟ್‌ನ ಈ ಮಹತ್ವದ ತೀರ್ಪಿನಿಂದ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಂಡಿರುವುದರಿಂದ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು. ಈ ಪ್ರಕರಣದಲ್ಲಿ ಸೆಕ್ಷನ್ 17A ಅನುಮತಿ ಪಡೆಯುವುದು ಮುಖ್ಯವಾಗಿದೆ. ಸಿಎಂ ಸಿದ್ದರಾಮಯ್ಯ ಪರ ವಕೀಲರು ಇಂದು ಮಧ್ಯಾಹ್ನ 2:30ಕ್ಕೆ ಆದೇಶದ ಪ್ರತಿ ಪಡೆಯಬೇಕು. ಈ ಬಾರಿ ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ

ಅದನ್ನು ಪ್ರಶ್ನಿಸಿ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಇಂದೇ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ಕೋರುವ ಸಾಧ್ಯತೆ ಇದೆ.

Share This Article
Leave a comment