ಮೈಸೂರು: . ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿದೆ.
ಮೈಸೂರಿನ ಲೋಕಾಯುಕ್ತ ಪೊಲೀಸರು ಸ್ನೇಹಮಯಿ ಕೃಷ್ಣ ಅವರ ದೂರಿನ ಆಧಾರದ ಮೇಲೆ , ಸಿಎಂ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದಾರೆ.
ಸಿದ್ದರಾಮಯ್ಯ, ಮುಖ್ಯಮಂತ್ರಿ (A1) ,ಪಾರ್ವತಿ ಬಿಎಂ, ಸಿದ್ದರಾಮಯ್ಯ ಪತ್ನಿ(A2) ,ಮಲ್ಲಿಕಾರ್ಜುನ ಸ್ವಾಮಿ, ಸಿದ್ದರಾಮಯ್ಯ, ಬಾಮೈದ(A3),ದೇವರಾಜು, ಮಾರಾಟಗಾರ, ನಕಲಿ ಭೂ ಮಾಲೀಕ (A4) ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಇದನ್ನು ಓದಿ –ಇಬ್ಬರು ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಯಾವ ಯಾವ ಕಾಯ್ದೆ, ಐಪಿಸಿ ಸೆಕ್ಷನ್ ಅಡಿ ಎಫ್‌ಐಆರ್ ದಾಖಲಾಗಿದೆ ?
ಭ್ರಷ್ಟಾಚಾರ ತಡೆ ಕಾಯ್ದೆ 1988
– ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988
– ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲು
– ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ
– ಸೆಕ್ಷನ್ 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು
– ಸೆಕ್ಷನ್ 403 ಆಸ್ತಿಯ ದುರ್ಬಳಕೆ
– ಸೆಕ್ಷನ್ 406 ನಂಬಿಕೆಯ ಉಲ್ಲಂಘನೆ
– ಸೆಕ್ಷನ್ 420 ವಂಚನೆ
– ಸೆಕ್ಷನ್ 426 ದುಷ್ಕೃತ್ಯವೆಸಗುವುದು
– ಸೆಕ್ಷನ್ 465 ಫೋರ್ಜರಿ
– ಸೆಕ್ಷನ್ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಫೋರ್ಜರಿ
– ಸೆಕ್ಷನ್ 340 ಅಕ್ರಮ ಬಂಧನ
– ಸೆಕ್ಷನ್ 351 ಇತರರಿಗೆ ಹಾನಿಯನ್ನುಂಟು ಮಾಡುವುದು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ