Karnataka

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಮೈಸೂರು: . ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿದೆ.

ಮೈಸೂರಿನ ಲೋಕಾಯುಕ್ತ ಪೊಲೀಸರು ಸ್ನೇಹಮಯಿ ಕೃಷ್ಣ ಅವರ ದೂರಿನ ಆಧಾರದ ಮೇಲೆ , ಸಿಎಂ ಮತ್ತು ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಆದೇಶ ನೀಡಿದ್ದಾರೆ.

ಸಿದ್ದರಾಮಯ್ಯ, ಮುಖ್ಯಮಂತ್ರಿ (A1) ,ಪಾರ್ವತಿ ಬಿಎಂ, ಸಿದ್ದರಾಮಯ್ಯ ಪತ್ನಿ(A2) ,ಮಲ್ಲಿಕಾರ್ಜುನ ಸ್ವಾಮಿ, ಸಿದ್ದರಾಮಯ್ಯ, ಬಾಮೈದ(A3),ದೇವರಾಜು, ಮಾರಾಟಗಾರ, ನಕಲಿ ಭೂ ಮಾಲೀಕ (A4) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.ಇದನ್ನು ಓದಿ –ಇಬ್ಬರು ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಯಾವ ಯಾವ ಕಾಯ್ದೆ, ಐಪಿಸಿ ಸೆಕ್ಷನ್‌ ಅಡಿ ಎಫ್‌ಐಆರ್ ದಾಖಲಾಗಿದೆ ?

ಭ್ರಷ್ಟಾಚಾರ ತಡೆ ಕಾಯ್ದೆ 1988
– ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988
– ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲು
– ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ
– ಸೆಕ್ಷನ್ 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು
– ಸೆಕ್ಷನ್ 403 ಆಸ್ತಿಯ ದುರ್ಬಳಕೆ
– ಸೆಕ್ಷನ್ 406 ನಂಬಿಕೆಯ ಉಲ್ಲಂಘನೆ
– ಸೆಕ್ಷನ್ 420 ವಂಚನೆ
– ಸೆಕ್ಷನ್ 426 ದುಷ್ಕೃತ್ಯವೆಸಗುವುದು
– ಸೆಕ್ಷನ್ 465 ಫೋರ್ಜರಿ
– ಸೆಕ್ಷನ್ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಫೋರ್ಜರಿ
– ಸೆಕ್ಷನ್ 340 ಅಕ್ರಮ ಬಂಧನ
– ಸೆಕ್ಷನ್ 351 ಇತರರಿಗೆ ಹಾನಿಯನ್ನುಂಟು ಮಾಡುವುದು

Team Newsnap
Leave a Comment

Recent Posts

ಇಬ್ಬರು ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಬೆಂಗಳೂರು: ಬಿಬಿಎಂಪಿ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ… Read More

September 27, 2024

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನಬೆಂಗಳೂರು

ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ… Read More

September 26, 2024

ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.… Read More

September 26, 2024

ಕ್ಯಾಂಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ದುರ್ಮರಣ

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ಕ್ಯಾಂಟರ್ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.… Read More

September 26, 2024

ರಾಜ್ಯ ಸರ್ಕಾರದಿಂದ 318 ಪಿಡಿಒ ಅಮಾನತು

ಬೆಂಗಳೂರು : ರಾಜ್ಯ ಸರ್ಕಾರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318… Read More

September 26, 2024

ಬಿಜೆಪಿ ಕಾರ್ಯಕರ್ತರಿಂದ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ… Read More

September 25, 2024