ಬೆಂಗಳೂರು : ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ,ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರು,ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜುಲೈ 12ರ ಶುಕ್ರವಾರ ಮೈಸೂರು ಮುಡಾ ಹಗರಣದ ಪ್ರಕರಣ ಹಾಗೂ ರಾಜ್ಯದ ಜನವಿರೋಧಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ನಿನ್ನೆಯೇ ಹೇಳಿದ್ದು ,ಇಂದು ಮೈಸೂರಿಗೆ ಹೋಗುತ್ತಿದ್ದ ವೇಳೆಯೇ ಕೆಂಗೇರಿಯಲ್ಲಿ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಇದನ್ನು ಓದಿ –ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ
ಇಂದು ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಹೋಗತುತಿದ್ದ ಬಿಜೆಪಿ ಕಾರ್ಯಕರ್ತರ ಬಸ್ ತಡೆದ ಪೊಲೀಸರು ವಶಪಡಿಸಿಕೊಂಡಿದ್ದಾರೆ.
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ