December 26, 2024

Newsnap Kannada

The World at your finger tips!

2828c501 e765 4ae0 b1cd ac8bfe0d2d8d

ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ: ಪೋಲಿಸ್ ಅಧಿಕಾರಿ ಬಂಧನ

Spread the love

ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜಿರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಸಂಸ್ಥೆ 12 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಬಂಧನ ಮಾಡಿದೆ.‌

ಅಂಬಾನಿ ಮನೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಜಿಲೆಟಿನ್ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ¸ ವಾಜಿರನ್ನು ವಶಪಡಿಸಿಕೊಂಡು 12 ಗಂಟೆಗಳ ಕಾಲ ವಿಚಾರಣೆ ನಡೆಸಿ ನಂತರ ಶನಿವಾರ ರಾತ್ರಿ 11.50ಕ್ಕೆ ಬಂಧಿಸಿದ್ದಾರೆ. ಅಲ್ಲದೆ ಭಾನುವಾರ ಸಚಿನ್ ವಾಜಿರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತದೆ.

ambani car

ಎನ್‍ಐಎ ವಕ್ತಾರರ ಪ್ರಕಾರ, “ಫೆಬ್ರವರಿ 25 ರಂದು ಕಾರ್ಮೈಕಲ್ ರಸ್ತೆ ಬಳಿ ಸ್ಫೋಟಕಗಳಿಂದ ತುಂಬಿದ್ದ ವಾಹನವನ್ನು ಇರಿಸುವಲ್ಲಿ ಸಚಿನ್ ವಾಜಿರವರ ಪಾತ್ರವಿರುವುದರಿಂದ ಸೆಕ್ಷನ್ 286 ( ಸ್ಫೋಟಕ ವಸ್ತುವಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ವರ್ತನೆ), 465(ಖೋಟಾ ಶಿಕ್ಷೆ), 473 (ನಕಲಿ ಮುದ್ರೆಯನ್ನು ತಯಾರಿಸುವುದು ಅಥವಾ ಹೊಂದಿರುವುದು ಇತ್ಯಾದಿ), 502 (2)(ಕ್ರಿಮಿನಲ್ ಬೆದರಿಕೆ), 120 ಬಿ ಅಡಿಯಲ್ಲಿ ಸಚಿನ್ ವಾಜಿರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 25 ರಂದು ಮುಕೇಶ್ ಅಂಬಾನಿ ನಿವಾಸದ ಬಳಿ ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಕಾರು ಹಾಗೂ ಬೆದರಿಕೆ ಪತ್ರವೊಂದು ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಸಚಿನ್ ವಾಜಿರವರಿಗೆ ತನಿಖೆ ನಡೆಸಲು ಸೂಚಿಸಲಾಗಿತ್ತು, ಆದರೆ ಬಳಿಕ ಅವರನ್ನು ತೆಗೆದು ಹಾಕಿ ಪ್ರಕರಣ ಕುರಿತಂತೆ ತನಿಖೆ ನಡೆಸಲು ಎನ್‍ಐಎ ಮುಂದಾಗಿದೆ.

Copyright © All rights reserved Newsnap | Newsever by AF themes.
error: Content is protected !!