ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಈಗ ನಿರ್ದೇಶನದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಸಲಗ ಸಿನಿಮಾದ ಮುಗಿಸಿರುವ ವಿಜಿ ಈಗ ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ. ವಿಜಯ್ ನಿರ್ದೇಶನದ ಮೊದಲ ಸಿನಿಮಾ ಸಲಗ ರಿಲೀಸ್ ಗೆ ಸಿದ್ಧವಾಗಿದೆ. ಈ ಸಿನಿಮಾ ರಿಲೀಸ್ ಗೂ ಮೊದಲೇ ಮತ್ತೊಂದು ಸಿನಿಮಾದಲ್ಲಿ ನಿರತರಾಗಿದ್ದಾರೆ.
ಅಂದ ಹಾಗೆ ಈ ಬಾರಿ ವಿಜಯ್ ಲವ್ ಸ್ಟೋರಿ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಚಿತ್ರರಂಗಕ್ಕೆ ಹೊಸಬರನ್ನು ಪರಿಚಯಿಸಬೇಕೆಂದು ಕೊಂಡಿದ್ದ ವಿಜಿ ಈಗಾಗಲೇ ನಾಯಕ ಲಕ್ಷ್ಮಣ್ ಅಲಿಯಾನ್ ಲಕ್ಕಿ ಗೋಪಾಲ್ ನನ್ನು ಪರಿಚಯಿಸಿದ್ದಾರೆ. ಇದೀಗ ನಾಯಕಿಯನ್ನು ಪರಿಚಯಿಸಿದ್ದಾರೆ.
ದುನಿಯಾ ವಿಜಯ್ ನಿರ್ದೇಶನದ ಎರಡನೇ ಸಿನಿಮಾದಲ್ಲಿ ಪಾರು ಧಾರಾವಾಹಿ ಖ್ಯಾತಿಯ ನಟಿ ಮೋಕ್ಷಿತಾ ಪೈ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಮೂಲಕ ಮೋಕ್ಷಿತಾ ಮೊದಲ ಬಾರಿಗೆ ಬೆಳ್ಳಿ ಪರದೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ.
ಬಹುತೇಕ ಹೊಸಬರಿಗೆ ಅವಕಾಶ ಕೊಡಲು ಮುಂದಾಗಿರುವ ದುನಿಯಾ ವಿಜಯ್ ಈ ಸಿನಿಮಾ ಮೂಲಕ ಬಹುತೇಕ ಹೊಸಬರನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ.
ಲಕ್ಕಿ ಗೋಪಾಲ್ ಗೆ ನಾಯಕಿಯಾಗಿ ನಟಿ ಮೋಕ್ಷಿತಾ ಬಣ್ಣ ಹಚ್ಚುತ್ತಿದ್ದಾರೆ. ಪಾರು ಧಾರಾವಾಹಿ ಮೂಲಕ ಮೋಡಿ ಮಾಡಿದ್ದ ಮೋಕ್ಷಿತಾ ಸಿನಿಮಾ ಮೂಲಕ ಎಲ್ಲರ ಮನ ಗೆಲ್ಲುತ್ತಾರಾ ಎನ್ನುವುದು ಕುತೂಹಲ ಮೂಡಿಸಿದೆ.
ಇನ್ನೂ ಹೆಸರಿಡದ ಸಿನಿಮಾಗೆ ವಾಸುಕಿ ವೈಭವ್ ಮತ್ತು ಚರಣ್ ರಾಜ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಮಾಸ್ತಿ ಮಂಜು ಸಂಭಾಷಣೆ ಚಿತ್ರಕ್ಕಿರಲಿದೆ. ಸದ್ಯ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಸಿನಿಮಾತಂಡ ಸದ್ಯದಲ್ಲೇ ಚಿತ್ರೀಕರಣಕ್ಕೆ ಹೊರಡುವ ಸಾಧ್ಯತೆ ಇದೆ.
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
More Stories
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!