ಹಾಸನ: ಲಂಚಕ್ಕೆ ಕೈಯೊಡ್ಡಿದಾಗಲೇ ಹಾಸನ ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆ.ಆರ್. ವೆಂಕಟೇಶ್ ಅವರು ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ ಬಿಡುಗಡೆಗೆ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ಲು 10.50 ಲಕ್ಷ ರೂ. ಬಿಡುಗಡೆ ಮಾಡಲು ಒಂದುವರೆ ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು.ಇದನ್ನು ಓದಿ –ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
ಈ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತರಿಗೆ ದೂರು ನೀಡಿದ ಬಳಿಕ, ಲೋಕಾಯುಕ್ತ ಅಧಿಕಾರಿಗಳು ತಕ್ಷಣ ದಾಳಿ ನಡೆಸಿ ಇವರನ್ನು ವಶಕ್ಕೆ ಪಡೆದಿದ್ದಾರೆ.
More Stories
ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ