ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ನಟ ದರ್ಶನ್ ಸಧ್ಯಕ್ಕೆ ಜೈಲೂಟವನ್ನೇ ಸೇವಿಸಬೇಕಿದೆ.
ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿದೆ.
ದರ್ಶನ್ ಪರ ಮತ್ತು ಪೊಲೀಸರ ಪರ ವಕೀಲರ ವಾದವನ್ನು ಆಲಿಸಿದ ನ್ಯಾಯಾಧೀಶರು ಜುಲೈ 25 ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದರು.
ದರ್ಶನ್ ಪರ ವಕೀಲರ ವಾದ ಏನಿತ್ತು?
ಆರೋಪಿಗೆ ಜೈಲಿನಲ್ಲಿ ಇರುವಾಗ ಮನೆಯ ಊಟ ಪಡೆಯಬಹುದು. ಇದು ವಿಚಾರಣಾಧೀನ ಕೈದಿಯ ಹಕ್ಕು. ಜೈಲಿನ ನಿಯಮಗಳಲ್ಲಿ ಇದರ ಉಲ್ಲೇಖ ಇದೆ. ಆರೋಪಿಗೆ ಕೆಲವೊಂದು ನಿಬಂಧನೆಗಳನ್ನು ಹೇಳಿ ಅವಕಾಶ ಕೊಡಿಸಬಹುದು. ತಮ್ಮದೇ ವೆಚ್ಚದಲ್ಲಿ ಇದನ್ನು ಪಡೆಯಲು ಅವಕಾಶವನ್ನು ಹೊಂದಿಸಲಾಗಿದೆ. ಕೊಲೆಯ ಆರೋಪಿಗಳಿಗೆ ವಿನಾಯಿತಿ ನೀಡಲಾಗಿದೆ.ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಆಗಸ್ಟ್ 3 ರವರೆಗೆ ಜೈಲೇ ಗತಿ
ಸೆಕ್ಷನ್ 30 ರ ಪ್ರಕಾರ ಜೈಲಿನಲ್ಲಿ ಇರುವ ಆರೋಪಿ ಮನೆಯ ಊಟ ಪಡೆಯಬಹುದು. ಅಲ್ಲದೇ ಮನೆಯಿಂದ ಹಾಸಿಗೆ ವ್ಯವಸ್ಥೆ ಮತ್ತು ಪುಸ್ತಕಗಳನ್ನು ಹೊಂದುವ ಅವಕಾಶ ಇದೆ . ಈ ಎಲ್ಲಾ ಅವಕಾಶಗಳನ್ನು ಆರೋಪಿಗಳಿಗೆ ಒದಗಿಸಿಕೊಡಬಹುದು ಎಂದು ವಾದಿಸಿದರು.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ