ಕನ್ನಡ ಚಿತ್ರರಂಗದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹತ್ಯೆಗೆ ಸಂಚು ಹೂಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ದರ್ಶನ್ ಹಾಗೂ ಸಂಜು ಬಂಧಿತ ಆರೋಪಿಗಳು.
ಪ್ರಕರಣದ 16 ಮತ್ತು 17ನೇ ಆರೋಪಿಗಳಾಗಿರುವ ಇವರ ಮೇಲೆ ಉಮಾಪತಿ ಹತ್ಯೆಗೆ ಸಂಚು ಹೂಡಿದ ಆರೋಪ ಕೇಳಿ ಬಂದಿತ್ತು.
ಇದರ ಬೆನ್ನಲ್ಲೇ 1 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗಳು ಸುಂಕದಕಟ್ಟೆಯ ಚೈತ್ರಾ ಬಾರ್ ಬಳಿ ಖಾಕಿ ಬಲೆಗೆ ಬಿದ್ದಿದ್ದಾರೆ. ಸಿಸಿಬಿಯ ಪಶ್ಚಿಮ ವಿಭಾಗದ ಸಂಘಟಿತ ಅಪರಾಧ ನಿಯಂತ್ರಣ ದಳ ಈ ಕಾರ್ಯಾಚರಣೆ ನಡೆಸಿದೆ.
ಆರೋಪಿಗಳನ್ನು ಸದ್ಯ ಜಯನಗರ ಠಾಣಾ ಪೊಲೀಸರ ವಶಕ್ಕೆ ನೀಡಲಾಗಿದೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ