December 24, 2024

Newsnap Kannada

The World at your finger tips!

president

15ನೇ ರಾಷ್ಟ್ರಪತಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ದ್ರೌಪದಿ ಮುರ್ಮು

Spread the love

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಸೋಮವಾರ 10. 15 ಕ್ಕೆ ಪ್ರಮಾಣವಚನ ಸ್ವೀಕರಿಸಿದರು .

ಚೀಫ್ ಜಸ್ಟೀಸ್ ಆಫ್ ಇಂಡಿಯಾ ಎನ್​.ವಿ.ರಮಣ್ ಅವರು ದ್ರೌಪದಿ ಮುರ್ಮುಗೆ ಪ್ರಮಾಣವಚನ ಭೋದಿಸಿದರು.

ದೇಶದ ಸಂಸತ್ ಭವನ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಯಿತು. ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದೇಶದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ಮುರ್ಮು ಪಾತ್ರರಾಗಿದ್ದಾರೆ. ಇದನ್ನು ಓದಿ – ಅಕ್ಷರ್ ಆರ್ಭಟಕ್ಕೆ ಬೆದರಿದ ಕೆರಿಬಿಯನ್ನರು-ಸರಣಿ ಗೆದ್ದು ಟೀಂ ಇಂಡಿಯಾ ವಿಶ್ವದಾಖಲೆ

ಒಡಿಶಾದ ಆದಿವಾಸಿ ಸಮುದಾಯದ ಮಹಿಳೆ ರಾಷ್ಟ್ರದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಇಂದು ಅಲಂಕರಿಸಿದ್ದಾರೆ. ಈ ಮೂಲಕ ಭಾರತದ ರಾಜತಾಂತ್ರಿಕ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಸೃಷ್ಟಿಯಾಗಿದೆ.

ಈ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮಂತ್ರಿ ಮಂಡಲದ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಭಾರತೀಯ ಸೇನೆಯ ಮುಖ್ಯಸ್ಥರು ಪಾಲ್ಗೊಂಡಿದ್ದರು.

Copyright © All rights reserved Newsnap | Newsever by AF themes.
error: Content is protected !!