ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಮೊದಲ ಪ್ರಕರಣದಲ್ಲಿ ಹೈಕೋರ್ಟ್ ಷರತ್ತು ಬದ್ದ ಜಾಮೀನು ನೀಡಿತ್ತು. ಈ ಜಾಮೀನಿನ ಬಳಿಕ, ಇಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು 2ನೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ್ದು, ಜೈಲಿನಿಂದ ಬಿಡುಗಡೆಗೆ ಆದೇಶ ಮಾಡಿದೆ.
ವಿಚಾರಣೆ ಮುಗಿಯುವವರೆಗೂ ಚಿತ್ರದುರ್ಗಕ್ಕೆ ಹೋಗುವಂತಿಲ್ಲ. ಇಬ್ಬರ ಶ್ಯೂರಿಟಿಯನ್ನು ಒದಗಿಸಬೇಕು. ವೀಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಎರಡು ಲಕ್ಷ ರೂ. ಬಾಂಡ್ ಶ್ಯೂರಿಟಿ ನೀಡಬೇಕು. ಪಾಸ್‌ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂತಹ ಕೃತ್ಯ ಪುನರಾವರ್ತನೆಯಾಗಬಾರದು ಎಂದು ಷರತ್ತು ವಿಧಿಸಿದೆ.
ಇಂದು ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯವು ಹೈಕೋರ್ಟ್ ನೀಡಿದ ಜಾಮೀನು ಪ್ರತಿಯನ್ನು ಪರಿಶೀಲಿಸಿದ ನಂತರ ಚಿತ್ರದುರ್ಗದ ಕಾರಾಗೃಹದಿಂದ ಮುರುಘಾ ಶ್ರೀಗಳನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ. ಹೀಗಾಗಿ ಚಿತ್ರದುರ್ಗದ ಮುರುಘಾ ಶರಣರು ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು