ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ಮುರುಘಾ ಸ್ವಾಮಿ ವಜಾ

rape , allegation , FIR
Muruga Shri did not rape: Report from District Hospital Doctor ಮುರುಘಾ ಶ್ರೀಗಳು ಅತ್ಯಾಚಾರ ಮಾಡಿಲ್ಲ: ಜಿಲ್ಲಾಸ್ಪತ್ರೆಯ ವೈದ್ಯರಿಂದ ವರದಿ

ಪೊಕ್ಸೋ ಕೇಸ್‌ನಡಿಯಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಅವರನ್ನು ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಹೊಳೆಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಗ್ರಾಮದಲ್ಲಿರುವ ಅನಾಥ ಸೇವಾಶ್ರಮದಲ್ಲಿ ಮುರುಘಾ ಸ್ವಾಮಿ ಅಧ್ಯಕ್ಷರಾಗಿದ್ದರು.

ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅನಾಥ ಸೇವಾಶ್ರಮ ವಿಶ್ವಸ್ತ ಸಮಿತಿಯು ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿರುವುದಾಗಿ ತಿಳಿಸಿದೆ.

ಈ ಬಗ್ಗೆ ಗೌರವ ಕಾರ್ಯದರ್ಶಿ ಪ್ರೊ. ಕೆ. ಇ ರಾಧಾಕೃಷ್ಣ ಪ್ರಕಟಣೆಯನ್ನು ಹೊರಡಿಸಿ, ಜೊತೆಗೆ ವಿಶ್ವಸ್ತ ಸಮಿತಿಯ ಸದಸ್ಯತ್ವದಿಂದಲೂ ಮುರುಘಾ ಶ್ರೀ ಅಮಾನತು ಮಾಡಿರುವುದಾಗಿ ತಿಳಿಸಿದ್ದಾರೆ.

Leave a comment

Leave a Reply

Your email address will not be published. Required fields are marked *

error: Content is protected !!