January 30, 2026

Newsnap Kannada

The World at your finger tips!

muraga durga

ಮುರುಘಾ ಸ್ವಾಮಿ ನ್ಯಾಯಾಂಗ ಬಂಧನ ಸೆ.27ರ ತನಕ ವಿಸ್ತರಣೆ

Spread the love

ಮಠದ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾದ ಮುರುಘಾ ಮಠದ ಶಿವಮೂರ್ತಿ ಮುರುಘಾ ಸ್ವಾಮಿ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್‌ ಮತ್ತೆ 14 ದಿನಗಳ ಕಾಲ ಅಂದರೆ ಸೆ 27ರ ತನಕ ವಿಸ್ತರಣೆ ಮಾಡಿದೆ.

ಗೋವಾದಲ್ಲಿ 8 ಮಂದಿ ಕಾಂಗ್ರೆಸ್ ಶಾಸಕರು ಇಂದು ಬಿಜೆಪಿಗೆ – ಆಪರೇಷನ್ ಕಮಲ ಸಕ್ಸಸ್ !

ಇಂದಿಗೆ ಶಿವಮೂರ್ತಿ ಸ್ವಾಮಿ ನ್ಯಾಯಾಂಗ ಬಂಧನ ಅಂತ್ಯಗೊಂಡಿತ್ತು ಹೀಗಾಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಇಪ್ರಕರಣದ 2 ನೇ ಆರೋಪಿ ಹಾಸ್ಟೆಲ್ ವಾರ್ಡನ್‌ ರಶ್ಮಿ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಸೆಪ್ಟೆಂಬರ್ 27ರವರೆಗೆ ವಿಸ್ತರಣೆ ಮಾಡಿದೆ. ಈ ಪ್ರಕರಣದ 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ, 5ನೇ ಆರೋಪಿ ವಕೀಲ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.

error: Content is protected !!