ರೇಪ್‌ ಕೇಸ್‌ – ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್‌, ಪತ್ನಿಗೆ ಜಾಮೀನು

Team Newsnap
1 Min Read

ಅತ್ಯಾಚಾರ ಆರೋಪದ ಅಡಿಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿಯೂ ಆಗಿರುವ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮತ್ತು ಪತ್ನಿ ಸೌಭಾಗ್ಯ ಅವರಿಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಒಂದನೇ ಜಿಎಂಎಫ್‌ಸಿ ನ್ಯಾಯಾಲಯಕ್ಕೆ ಗುರುವರ ಮಧ್ಯಾಹ್ನ ಬಸವರಾಜನ್ ಹಾಗೂ ಸೌಭಾಗ್ಯ ಹಾಜರಾಗಿದ್ದರು. ಕೋರ್ಟ್‌ ಜಾಮೀನು ನೀಡಿದ್ದರಿಂದ ಆರೋಪಿಗಳು ಸದ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದಾರೆ. ಇದನ್ನು ಓದಿ – ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

rape,student assult,harassment

ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿಯಲ್ಲಿ ಎಸ್.ಕೆ.ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ ನೀಡಿದ ದೂರನ್ನು ಆಧರಿಸಿ ಎಸ್.ಕೆ.ಬಸವರಾಜನ್ ವಿರುದ್ಧ ಸೆಕ್ಷನ್ 354 (ಅತ್ಯಾಚಾರಕ್ಕೆ ಯತ್ನ) ಹಾಗೂ ಬಸವರಾಜನ್ ಮತ್ತು ಸೌಭಾಗ್ಯ ವಿರುದ್ಧ ಸೆಕ್ಷನ್ 341, 342, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ಓದಿ – ಮೈ- ಬೆಂ ರಾಷ್ಟ್ರೀಯ ಹೆದ್ದಾರಿ: ಚನ್ನಪಟ್ಟಣ , ರಾಮನಗರ ಬೈಪಾಸ್ ನಲ್ಲಿ ಸಂಚಾರಕ್ಕೆ ಅವಕಾಶ

ಆಡಳಿತಾಧಿಕಾರಿ ಬಸವರಾಜನ್ ಹಾಸ್ಟೆಲ್ ಪರಿಶೀಲನೆ ಮಾಡುವ ನೆಪದಲ್ಲಿ ಆಗಾಗ ಬಂದು ದೇಹದ ಅಂಗಾಂಗಗಳನ್ನು ಮುಟ್ಟಿ ಹಿಂಸೆ ನೀಡುತ್ತಿದ್ದರು. ಅತ್ಯಾಚಾರಕ್ಕೆ ಯತ್ನಿಸಿದಾಗ ಪ್ರತಿರೋಧ ತೋರಲಾಯಿತು. ಇದರಿಂದ ವಿಚಾರ ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದರು ಎಂದು ರಶ್ಮಿ ದೂರಿನಲ್ಲಿ ಉಲ್ಲೇಖಿಸಿದ್ದರು.

Share This Article
Leave a comment