ಮುಸ್ಲಿಂಮರ ಕಲ್ಲಂಗಡಿ ಹಣ್ಣಿನ ಅಂಗಡಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಲಾರಪ್ಪ ಗುಡ್ಡಪ್ಪನವರ, ಮಹಾಲಿಂಗ ಐಗಳಿ, ಚಿದಾನಂದ ಕಲಾಲ ಹಾಗೂ ಕುಮಾರ ಕಟ್ಟಿಮನಿ ಬಂಧಿತರು.
ನಬಿಸಾಬ್ ಮಾಲೀಕತ್ವದ ಕಲ್ಲಂಗಡಿ ಹಣ್ಣಿನಂಗಡಿ ಧ್ವಂಸ ಮಾಡಲಾಗಿತ್ತು. ಗಲಾಟೆ ಸಂಬಂಧ ನಬಿಸಾಬ್ ಅವರು ಧಾರವಾಡ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ಸ್ವೀಕರಿಸಿರುವ ಪೊಲೀಸರು ನಾಲ್ವರನ್ನು ಬಂಧನ ಮಾಡಿದ್ದಾರೆ. ಧಾರವಾಡ ಹೊರವಲಯದ ನುಗ್ಗಿಕೇರೆ ಆಂಜನೇಯನ ದೇವಸ್ಥಾನಕ್ಕೆ ಶನಿವಾರ ಸಾವಿರಾರು ಭಕ್ತರು ಬಂದು ದರ್ಶನ ಪಡೆಯುತ್ತಾರೆ. ದೇವಸ್ಥಾನದ ಬಳಿ 4 ಹಿಂದೂಯೇತರ ಅಂಗಡಿಗಳಿವೆ.
ಕಳೆದ 15 ದಿನಗಳ ಹಿಂದೆ ಶ್ರೀರಾಮ ಸೇನೆಯ ಕಾರ್ಯಕರ್ತರು ದೇವಸ್ಥಾನದ ಬಳಿ ಬಂದು ಪ್ರತಿಭಟನೆ ಮಾಡಿದ್ದರು. ಈ ವೇಳೆ ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಮನವಿ ಮಾಡಿದ್ದರು.
ಶನಿವಾರ ಹಿಂದೂಯೇತರ ಅಂಗಡಿಗಳು ಮುಚ್ಚದೇ ಇದ್ದಿದ್ದರಿಂದ ಶ್ರೀರಾಮ ಸೇನೆ ಕಾರ್ಯಕರ್ತರು ಸ್ಥಳಕ್ಕೆ ಬಂದು ಅಂಗಡಿಗಳಲ್ಲಿದ್ದ ಕಲ್ಲಂಗಡಿ ಹಣ್ಣು ಹಾಗೂ ತೆಂಗಿನಕಾಯಿಗಳನ್ನು ಒಡೆದು ಹಾಕಿದ್ದರು. ಈ ಘಟನೆಯ ಬಗ್ಗೆ ಭಾರಿ ವಿರೋಧ ವ್ಯಕ್ತವಾಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು