ಸಹೋದ್ಯೋಗಿ ನಡೆಸಿದ ಗುಂಡಿನ ದಾಳಿಗೆ ನಾಲ್ವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‍ಪಿಎಫ್) ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿರುವ ಘಟನೆ ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ.
ರಾಜ್ಯ ರಾಜಧಾನಿ ರಾಯ್‍ಪುರದಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಸುಕ್ಮಾ ಜಿಲ್ಲೆಯ ಮರೈಗುಡೆಮ್‍ನಲ್ಲಿರುವ ಲಿಂಗಂಪಲ್ಲಿಯ 50ನೇ ಬೆಟಾಲಿಯನ್‍ನ ಶಿಬಿರದಲ್ಲಿ ಸಿಆರ್‍ಪಿಎಫ್ ಯೋಧರ ನಡುವೆ ಘರ್ಷಣೆ ನಡೆದಿದೆ.
ಈ ಘಟನೆ ಮುಂಜಾನೆ 3.30ರ ಸುಮಾರಿಗೆ ನಡೆದಿದೆ. ಯೋಧನೊಬ್ಬ ತನ್ನ ಸಹ ಸೈನಿಕರ ಮೇಲೆ ಗುಂಡು ಹಾರಿಸಿದ್ದಾನೆ. ಈ ವೇಳೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಹೀಗಾಗಿ ಕೂಡಲೇ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಸಲಾಗಿದೆ ಎಂದು ತಿಳಿಸಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ