ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದು ಅವರು, ರಾಜ್ಯದ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಒತ್ತಾಯ ಕೇಳಿ ಬರುತ್ತಿದೆ. ಕೋಲಾರ, ಬಾದಾಮಿ ಹಾಗೂ ವರುಣಾ ಕ್ಷೇತ್ರವನ್ನು ಅಂತಿಮವಾಗಿ ಆಯ್ಕೆ ಮಾಡಿದ್ದೇನೆ. ಹೈಕಮಾಂಡ್ ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂಬುದನ್ನು ನಿರ್ಧಾರ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪದ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಗೊತ್ತಿರುವಾಗಿಯೇ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮಾಹಿತಿ ಕಳ್ಳತನ ಆಗಿದೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಇರುತ್ತಾರೆಂಬ ಕಾರಣಕ್ಕಾಗಿ ಅವರ ಮಾಹಿತಿಯನ್ನೇ ಡಿಲೀಟ್ ಮಾಡಿ ಬಿಜೆಪಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಆರೋಪಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು