ನನ್ನ ಆಸೆ ಆಕಾಂಕ್ಷೆಗಳು ನಿವೃತ್ತವಾಗಿವೆ: ಎಸ್.ಎಂ.ಕೃಷ್ಣ

Team Newsnap
1 Min Read

ನಾನು ರಾಜಕೀಯ ನಿವೃತ್ತಿ ಜೀವನದ ಆರಂಭ ಘಟ್ಟದಲ್ಲಿ ನನಗೆ ಪದ್ಮ ವಿಭೂಷಣ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸಂತಸ ವ್ಯಕ್ತಪಡಿಸಿದರು.

ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆ ಕುರಿತಂತೆ ಮಾತನಾಡಿದ ಕೃಷ್ಣ ಸಂತಸ ಹಂಚಿಕೊಂಡಿದ್ದಾರೆ.ಮೋದಿ ಪ್ರಧಾನಿಯಾಗಿದ್ದರಿಂದ ನನಗೆ ಪ್ರಶಸ್ತಿ ಬಂತು: ಎಸ್.ಎಲ್ ಭೈರಪ್ಪ

ಪದ್ಮ ವಿಭೂಷಣ ಘೋಷಣೆಯಾಗಿರುವುದಕ್ಕೆ ಬಹಳ ಸಂತೋಷ ಆಗುತ್ತಿದೆ. ನಾನು ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಘಟ್ಟದಲ್ಲಿ ನನಗೆ ಈ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯವಾಗಿದೆ. ಈ ಪ್ರಶಸ್ತಿಯನ್ನು ಕಳೆದ 6 ದಶಕದಲ್ಲಿ ನನಗೆ ಬೆಂಬಲಿಸಿದ 7 ಕೋಟಿ ಕನ್ನಡಿಗರಿಗೆ ನಮ್ರತೆಯಿಂದ ಅರ್ಪಿಸುತ್ತೇನೆ ಎಂದರು.

ನನ್ನ ರಾಜಕೀಯ ನಿವೃತ್ತಿಯೊಂದಿಗೆ ನನ್ನ ಆಸೆ ಆಕಾಂಕ್ಷೆಗಳು ನಿವೃತ್ತವಾಗಿವೆ. ಪ್ರಶಸ್ತಿಯ ಆಯ್ಕೆಯ ಮಾನದಂಡ ಆಯಾ ಕಾಲಘಟ್ಟದಲ್ಲಿ ಕಾಲಘಟ್ಟಕ್ಕೆ ತಕ್ಕಂತೆ ಬದಲಾಗಿದೆ ಎಂದು ಅಭಿಪ್ರಾಯಪಟ್ಟರು.

Share This Article
Leave a comment