January 7, 2025

Newsnap Kannada

The World at your finger tips!

auto chalaka

ನನ್ನ ಅಂತ್ಯಕ್ರಿಯೆಗೆ ಕುಮಾರಣ್ಣನೇ ಬರಬೇಕು: ಡೆತ್ ನೋಟ್​ ಬರೆದಿಟ್ಟು ಆಟೋ ಚಾಲಕ ಆತ್ಮಹತ್ಯೆ

Spread the love

ನನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟು ಆಟೋ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಬೊಮ್ಮಚ್ಚನ ಹಳ್ಳಿ ಜಯರಾಮು ಎಂಬ ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡವರು.

ಡೆತ್ ನೋಟ್ ನಲ್ಲಿ ಏನಿದೆ?

ನನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬರಬೇಕು, ಅವರು ನನ್ನ ಕುಟುಂಬಕ್ಕೆ ಧನಸಹಾಯ ಮಾಡಬೇಕೆಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.

ಆಟೋ ಚಾಲಕ ಜಯರಾಮು ಗ್ಯಾಂಗ್ರಿನ್​ನಿಂದ ಬಳಲುತ್ತಿದ್ದರು. ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ.

ಸಾಯುವ ಮುನ್ನ ಜಯರಾಮು ಜೇಬಿನಲ್ಲಿ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದೆ, ನನಗೆ ಬುದ್ಧಿಮಾಂದ್ಯ ಮಗನಿದ್ದಾನೆ. ನನ್ನ ಮಗನಿಗೆ ಕುಮಾರಸ್ವಾಮಿ ಧನ ಸಹಾಯ ಮಾಡಬೇಕೆಂದು ಮನವಿ ಮಾಡಿದ್ದಾನೆ.

ನಿಮ್ಮ ಋಣವನ್ನು ಮುಂದಿನ ಜನ್ಮದಲ್ಲಿ ತೀರಿಸುತ್ತೇನೆ. ನನ್ನ ಮಗನಿಗೆ ಒಂದು ದಾರಿ ಮಾಡಿಕೊಡಿ ಕುಮಾರಣ್ಣ ಎಂದು ಭಾವನಾತ್ಮಕವಾಗಿ ಜಯರಾಮು ಡೆತ್ ನೋಟ್ ಬರೆದಿದ್ದಾರೆ. ಮೃತನ ಅಂತ್ಯಕ್ರಿಯೆಗೆ ಹೆಚ್​ಡಿಕೆ ಆಗಮಿಸುವ ಸಾಧ್ಯತೆ ಇದೆ.

Copyright © All rights reserved Newsnap | Newsever by AF themes.
error: Content is protected !!