ಮೈಸೂರು ಮೇಯರ್‌, ಉಪಮೇಯರ್‌ ಚುನಾವಣೆ; ಕಾಂಗ್ರೆಸ್‌ ನಿಂದ ಹೊಸ ರಣತಂತ್ರ

Team Newsnap
1 Min Read

ಮೈಸೂರಿನ ಮೇಯರ್‌ ಮತ್ತು ಉಪಮೇಯರ್‌ ಚುನಾವಣೆ ರಂಗೇರಿದೆ. ಕಾಂಗ್ರೆಸ್‌, ಜೆಡಿಎಸ್‌ , ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ನಿಂದ ಮೇಯರ್‌ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಮೇಯರ್ ಸ್ಥಾನಕ್ಕೆ ಸಯ್ಯದ್ ಅಸ್ರತ್ ಉಲ್ಲಾ ಹಾಗೂ ಗೋಪಿ, ಜೆಡಿಎಸ್‌ನಿಂದ ಕೆ.ವಿ.ಶ್ರೀಧರ್, ಬಿಜೆಪಿಯಿಂದ ಶಿವಕುಮಾರ್ ನಾಮಪತ್ರ ಸಲ್ಲಿಸಿದರು.

ಉಪ ಮೇಯರ್‌ ಹುದ್ದೆಗೆ ಕಾಂಗ್ರೆಸ್‌ನಿಂದ ಶೋಭಾ ಸುನಿಲ್, ಜೆಡಿಎಸ್‌ನಿಂದ ರೇಷ್ಮಾಬಾನು, ಬಿಜೆಪಿಯಿಂದ ರೂಪ ನಾಮಪತ್ರ ಸಲ್ಲಿಸಿದರು. ಮೇಯರ್ ಗೆ ನಾಮಪತ್ರ ಸಲ್ಲಿಸಿರುವ ಜೆಡಿಎಸ್​ನ ಕೆ.ವಿ.ಶ್ರೀಧರ್ ಮೈಸೂರಿನ 3ನೇ ವಾರ್ಡ್​ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್​ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡಲು ನಿರ್ಧರಿಸಿದೆ.

ಇದನ್ನು ಓದಿನಂದಿಬೆಟ್ಟದಲ್ಲಿ ಸುಲ್ತಾನ ಪೇಟೆಯ ಎರಡು ಕಡೆ ಗುಡ್ಡ ಕುಸಿತ : ಪ್ರವಾಸಿಗರಿಗೆ ತೊಂದರೆ ಇಲ್ಲ

ಮೇಯರ್ ಸ್ಥಾನಕ್ಕೆ ಕಾಂಗ್ರೆಸ್​​ನಿಂದ ಸಯ್ಯದ್ ಹಸ್ರತ್ ಉಲ್ಲಾ ಮತ್ತು ಗೋಪಿ ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್​ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಗುತ್ತಿರುವ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಕಾಂಗ್ರೆಸ್ ಮುಂದಾಗಿದೆ.

ಮೈಸೂರು ಮೈಸೂರು

Share This Article
Leave a comment