ಮೈಸೂರು: ಸಾಲಿಗ್ರಾಮ ತಾಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿಯಲ್ಲಿ ಕಲುಷಿತ ನೀರು ಸೇವನೆಯಿಂದ ಓರ್ವ ಸಾವನ್ನಪ್ಪಿದ್ದು, 12 ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಗೋವಿಂದೇಗೌಡ (65) ಸಾವಿಗೀಡಾದ ವ್ಯಕ್ತಿಯಾಗಿದ್ದು, ಗ್ರಾಮದ ಟ್ಯಾಂಕ್‌ನಿಂದ ಸರಬರಾಜಾಗಿದ್ದ ನೀರನ್ನು ಸೇವಿಸಿ ಕೆಲವರಿಗೆ ವಾಂತಿ ಭೇದಿ ಆಗಿದೆ ಎಂದು ಶಂಕಿಸಲಾಗಿದೆ.
ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಸ್ವಸ್ಥರನ್ನು ತಕ್ಷಣವೇ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ.
ಗೋವಿಂದೇಗೌಡ ಎಂಬುವವರು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ,ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಮಂಡ್ಯ ಭ್ರೂಣ ಹತ್ಯೆ ಪ್ರಕರಣ : ಆರು ಮಂದಿ ಬಂಧನ
ಬೆಟ್ಟಹಳ್ಳಿ ಗ್ರಾಮಕ್ಕೆ ತಾಲೂಕು ಆಸ್ಪತ್ರೆಯ ವೈದ್ಯರು ತಂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.
More Stories
ಧಾರವಾಡದ ಖಾಸಗಿ ಬಸ್ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 98 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಜಪ್ತಿ
ಕರ್ನಾಟಕ ಸರ್ಕಾರದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ
ನವೆಂಬರ್ನಲ್ಲಿ KSRTC ಬಸ್ಗಳಲ್ಲಿ ‘ಕ್ಯಾಶ್ಲೆಸ್ ವ್ಯವಸ್ಥೆ’ ಜಾರಿ