ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿಗೆ ಈ ಬಾರಿಯ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳಾಗಿವೆ.
ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಗೆ 319 ಕೋಟಿ ರೂಪಾಯಿ ಭೂಸ್ವಾಧೀನ ಅನುದಾನ ಮೀಸಲಿಡಲಾಗಿದೆ ಎಂದು ಬಜೆಟ್ ಮಂಡನೆ ವೇಳೆ ಅವರು ತಿಳಿಸಿದ್ದಾರೆ. ಇದರಿಂದ ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗೆ ಮತ್ತಷ್ಟು ಗತಿ ಸಿಗಲಿದೆ.
ಮೈಸೂರು, ವಿಜಯಪುರ ಮತ್ತು ರಾಯಚೂರು ಏರ್‌ಪೋರ್ಟ್ ಅಭಿವೃದ್ಧಿ:
- ಮೈಸೂರು ಏರ್‌ಪೋರ್ಟ್ ರನ್‌ವೇ ವಿಸ್ತರಣೆಗೆ 319 ಕೋಟಿ ರೂ. ಅನುದಾನ.
- ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣಕ್ಕೆ 348 ಕೋಟಿ ರೂ. ಅನುದಾನ.
- ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಗೆ 53 ಕೋಟಿ ರೂ. ಅನುದಾನ.
ಸಂಸದ ಯದುವೀರ್ ಸಲಹೆ:
ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ಕಳವಳ ವ್ಯಕ್ತಪಡಿಸಿದ್ದಾರೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ವಿಳಂಬ ಮತ್ತು ಅನುದಾನದ ಕೊರತೆ ಈ ಕಾರ್ಯಕ್ಕೆ ಅಡಚಣೆಯಾಗಿದ್ದು, ರಾಜ್ಯ ಸರ್ಕಾರ ಭೂಮಾಲೀಕರಿಗೆ ಬಾಕಿ ಇರುವ ಪಾವತಿಗಳನ್ನು ತಕ್ಷಣ ತೆರವುಗೊಳಿಸಬೇಕು ಮತ್ತು ಭೂಮಿಯನ್ನು ಎಎಐಗೆ ತ್ವರಿತವಾಗಿ ವರ್ಗಾಯಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮೈಸೂರಿಗೆ ಫಿಲ್ಮ್ ಸಿಟಿ:
ಮೈಸೂರಿನಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ಇದಕ್ಕಾಗಿ 150 ಎಕರೆ ಭೂಮಿಯನ್ನು ಮೀಸಲಿಡಲಾಗಿದೆ. ಜೊತೆಗೆ, ನಂದಿನಿ ಲೇಔಟ್‌ನಲ್ಲಿ ಚಲನಚಿತ್ರ ಅಕಾಡೆಮಿ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದೆ.
ಹೈ-ಟೆಕ್ ಮತ್ಸ್ಯದರ್ಶಿನಿ:
ಮೈಸೂರಿನಲ್ಲಿ ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಹೈ-ಟೆಕ್ ಮತ್ಸ್ಯದರ್ಶಿನಿ ಪ್ರಾರಂಭಿಸಲಾಗುವುದು. ರಾಜ್ಯದ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು. ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಇದನ್ನು ಓದಿ –Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಈ ಎಲ್ಲಾ ಯೋಜನೆಗಳು ಮೈಸೂರಿನ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿವೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು