ನೈರುತ್ಯ ರೈಲ್ವೆಯ ಮೈಸೂರು ವಿಭಾಗ ಕೆಲವು ಮಾರ್ಗಗಳಲ್ಲಿ ಭಾನುವಾರ ಹೊರತುಪಡಿಸಿ ನಾಳೆಯಿಂದ ಕಾಯ್ದಿರಿಸದ ರೈಲುಗಳ ಸಂಚಾರವನ್ನು ಆರಂಭಿಸಲಿದೆ.
ಈ ರೈಲಿಗೆ ಯಾವುದೇ ಕಾಯ್ದಿರಿಸುವಿಕೆ ಟಿಕೆಟ್ ಇಲ್ಲ. ರೈಲು ನಿಲ್ದಾಣ ದಲ್ಲೇ ಟಿಕಟ್ ಕೊಡಲಾಗುವುದು.
- 06255 ಸಂಖ್ಯೆಯ 16 ಬೋಗಿಗಳ ರೈಲು ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿದೆ. ಬೆಂಗಳೂರಿನಿಂದ ಸಂಜೆ 7ಕ್ಕೆ ಹೊರಟು ರಾತ್ರಿ 10ಕ್ಕೆ ಮೈಸೂರು ತಲುಪಲಿದೆ.
- 06256 ಸಂಖ್ಯೆ ರೈಲು ಬೆಳಗ್ಗೆ 6.10ಕ್ಕೆ ಮೈಸೂರಿನಿಂದ ಹೊರಟು 9.15ಕ್ಕೆ ಬೆಂಗಳೂರಿಗೆ ತಲುಪುತ್ತದೆ. 06257 ಸಂಖ್ಯೆಯ ರೈಲು ಬೆಳಗ್ಗೆ 9.20ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12.45ಕ್ಕೆ ಮೈಸೂರಿಗೆ ಆಗಮಿಸಲಿದೆ.
- 06258 ಸಂಖ್ಯೆ ರೈಲು ಮೈಸೂರಿನಿಂದ ಮಧ್ಯಾಹ್ನ 1.45ಕ್ಕೆ ಹೊರಟು ಸಂಜೆ 5ಕ್ಕೆ ಬೆಂಗಳೂರು ತಲುಪಲಿದೆ.
ಈ ರೈಲುಗಳು ನಾಯಂಡಹಳ್ಳಿ, ಜ್ಞಾನ ಭಾರತಿ, ಕೆಂಗೇರಿ, ಹೆಜ್ಜಾಲ, ಬಿಡದಿ, ಕೇತೋಹಳ್ಳಿ, ರಾಮನಗರ, ಚನ್ನಪಟ್ಟಣ, ಶೆಟ್ಟಿಹಳ್ಳಿ, ನಿಡಘಟ್ಟ, ಮದ್ದೂರು, ಹನಕೆರೆ, ಮಂಡ್ಯ, ಯಲಿಯೂರು, ಬ್ಯಾಡರಹಳ್ಳಿ, ಚಂದಗಿರಿ ಕೊಪ್ಪಲ್, ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ನಾಗನಹಳ್ಳಿಯಲ್ಲಿ ನಿಲುಗಡೆ ಹೊಂದಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು