February 20, 2026

Newsnap Kannada

The World at your finger tips!

politics,karnataka,election

ಮೈಸೂರು ಭಾಗದ ಬಿಜೆಪಿ ನಾಯಕರಿಗೆ ಗಂಡಸ್ತನವೇ ಇಲ್ಲ: ಸಿ.ಎಂ.ಇಬ್ರಾಹಿಂ

Spread the love

ಹಳೇ ಮೈಸೂರು ಭಾಗದ ಬಿಜೆಪಿ ನಾಯಕರಿಗೆ ಗಂಡಸ್ತನವೇ ಇಲ್ಲ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರನ್ನು ಕರೆಸಿ ಪ್ರಚಾರ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಗಂಭೀರ ಹೇಳಿಕೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕು ಹರಳಹಳ್ಳಿ ಗ್ರಾಮದಲ್ಲಿ ಮಾತನಾಡಿದ ಇಬ್ರಾಹಿಂ , ಸ್ಥಳೀಯ ಬಿಜೆಪಿ ನಾಯಕರಿಗೆ ಶಕ್ತಿ ಇಲ್ಲ. ಮೇಲ್ಗಡೆಯಿಂದ ಬಂದು ಇವರಿಗೆ ಇಂಜಕ್ಷನ್ ಕೊಡುತ್ತಿದ್ದಾರೆ ಅಷ್ಟೇ. ಇವರೆಲ್ಲಾ ಗಟ್ಟಿಯಾಗಲಿ ಅಂತಾ ಡೆಲ್ಲಿಯಿಂದ ಬಂದು ಇವರಿಗೆ ಚುಚ್ಚುತ್ತಿದ್ದಾರೆ ಎಂದರು.

ಈ ಬಾರಿ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲುವುದು ಖಚಿತ.ಫೆ 28 ರಿಂದ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಟೋಲ್ ಸಂಗ್ರಹ ಆರಂಭ
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದು ಸೂಕ್ತವಲ್ಲ. ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸಿದ್ರೂ ಸೋಲು ಕಟ್ಟಿಟ್ಟ ಬುತ್ತಿ ಎಂದು ಹೇಳಿದ್ದಾರೆ.

ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವುದು ಸೂಕ್ತವಲ್ಲ ಎಂದು ಸ್ನೇಹಿತನಿಗೆ ಒಂದು ಸಲಹೆ ಕೊಡ್ತೀನಿ ಎಂದಿದ್ದಾರೆ.

error: Content is protected !!