ನ್ಯೂಸ್ ಸ್ನ್ಯಾಪ್.
ಮೈಸೂರು.
2020ರವಮೈಸೂರು ದಸರಾ ಮಹೋತ್ಸವ ಹೇಗಿರುತ್ತೆ? ಹೇಗೆ ಇರಬೇಕು ಎನ್ನುವುದರ
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸಿ.ಟಿ.ರವಿ ಉಪಸ್ಥಿತಿಯಲ್ಲಿ ಶನಿವಾರ ಮೈಸೂರಿನಲ್ಲಿ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆಯ ಪ್ರಮುಖ ನಿರ್ಧಾರ ಕೈಗೊಂಡಿತು
ಮುಖ್ಯಾಂಶಗಳು
- ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಮಹೋತ್ಸವ ಸರಳ ಹಾಗೂ ಸಾಂಪ್ರದಾಯಿಕವಾಗಿ ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರುತ್ತದೆ.
- ಅಕ್ಟೋಬರ್ 2 ರಂದು ಮಧ್ಯಾಹ್ನ 12:18 ಗಂಟೆಗೆ ದಸರಾ ಗಜಪಡೆ ಮೈಸೂರು ಅರಮನೆ ಆವರಣದಲ್ಲಿ ಸ್ವಾಗತಿಸಲಾಗುವುದು.
- ಈ ಹಿಂದೆ ವೀರನ ಹೊಸಹಳ್ಳಿಯಲ್ಲಿ ಆಯೋಜಿಸುತ್ತಿದ್ದ ಗಜಪಯಣ ಸಮಾರಂಭ ಇರುವುದಿಲ್ಲ. ನೇರವಾಗಿ ಮೈಸೂರು ಅರಮನೆ ಆವರಣಕ್ಕೆ ಗಜಪಡೆಯ ಆಗಮನವಾಗಲಿದೆ.
- ಈ ಬಾರಿ ಕೊರೊನಾ ವಾರಿಯರ್ಸ್ ಗಳಿಂದ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ.
- ಐವರು ಕೊರೊನಾ ವಾರಿಯರ್ಸ್ ಗಳ ಪೈಕಿ ಒಬ್ಬರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಉಳಿದವರಿಗೆ ಸನ್ಮಾನ ಮಾಡಲಾಗುತ್ತದೆ.
- ಈ ಸನ್ಮಾನಿತರ ಪಟ್ಟಿಯಲ್ಲಿ ಕೋವಿಡ್ ಶವ ಸಂಸ್ಕಾರ ಮಾಡಿದ ವ್ಯಕ್ತಿಯನ್ನು ಸೇರಿಸಿಕೊಳ್ಳುವ ಬಗ್ಗೆ ಪ್ರಸ್ತಾಪಬಂದಿದೆ.
- 2020ರ ಅಕ್ಟೋಬರ್ 17 ರಂದು ಬೆಳಿಗ್ಗೆ 7:45 ರಿಂದ 8:15 ರೊಳಗಿನ ಶುಭ ಮುಹೂರ್ತದಲ್ಲಿ ಈ ಬಾರಿಯ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ.
- ದಸರಾ ದೀಪಾಲಂಕಾರ ಪ್ರತಿ ಬಾರಿಯಂತೆಯೇ ವಿದ್ಯುತ್ ನಿಗಮ ನಿರ್ವಹಣೆ ಮಾಡಲಿದೆ.
- ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ.
- ಅರಮನೆ ಆವರಣದೊಳಗೆ ನಡೆಯುವ ಜಂಬೂ ಸವಾರಿಗೆ ಎರಡು ಸಾವಿರ ಮಂದಿಗೆ ಅವಕಾಶ ಸಾಮರ್ಥ್ಯವಿದೆ.
- ಎಷ್ಟು ಜನರ ಸೇರಿಸಲು ಅನುಮತಿ ಸಿಗುತ್ತದೋ ನೋಡಿ, ಆಹ್ವಾನಿತರ ಸಂಖ್ಯೆಯನ್ನು ನಿರ್ಧರಿಸಲಾಗುವುದು.
- ಕೇಂದ್ರ ಸರ್ಕಾರದ ಮಾರ್ಗ ಸೂಚಿ ಪ್ರಕಾರವೇ ಮೆರವಣಿಗೆ ನಡೆಸಲಾಗುವುದು.
- ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ ಅಭಿಮನ್ಯು ಆನೆ ಚಿನ್ನದ ಅಂಬಾರಿ ಹೊತ್ತು ಸಾಗಲಿದೆ. ಸುಪ್ರಿಂ ಕೋರ್ಟ್ ಆದೇಶದ ಪ್ರಕಾರ ಅರ್ಜುನನಿಗೆ 60 ವರ್ಷ ಮೀರಿರುವುದರಿಂದ ಅಂಬಾರಿ ಹೊರುವ ಅವಕಾಶವಿಲ್ಲ.
- ಅಭಿಮನ್ಯು ಜೊತೆಗೆ ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿವೆ.
- ನವರಾತ್ರಿಯ ಎಲ್ಲಾ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರನ್ನು ಕಾರ್ಯಕ್ರಮ ನೀಡಲು ಆಹ್ವಾನಿಸಲಾಗುವುದು. ಎಲ್ಲಾ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲ ತಾಣದಲ್ಲಿ ನೇರ ಪ್ರಸಾರ ಮಾಡಲಾಗುವುದು.
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ