November 22, 2024

Newsnap Kannada

The World at your finger tips!

dasara 1

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ವೇಳಾಪಟ್ಟಿ ಬಿಡುಗಡೆ

Spread the love

ಮೈಸೂರು: ಸರ್ಕಾರ ಹಾಗು ಜಿಲ್ಲಾಡಳಿತ ಮೈಸೂರು ದಸರಾ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು , ಮೈಸೂರು ದಸರಾ-2024ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅಕ್ಟೋಬರ್​ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಮೈಸೂರು ದಸರಾಗೆ ಚಾಲನೆ ದೊರೆಯಲಿದ್ದು ,. ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ.

ಅಕ್ಟೋಬರ್​ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​ ನಡೆಯಲಿದ್ದು ,ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ.

ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಿಸಿ ,ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ.

ಸಂಜೆ 7ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದ್ದು ,ಪಂಜಿನ ಕವಾಯತ್​ ನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಉದ್ಘಾಟಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಯುವ ದಸರಾವನ್ನು ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದು , ಪ್ರತಿದಿನ ಸಂಜೆ 5 ಗಂಟೆಯಿಂದ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ.ಭಾರಿ ಅವಘಡ : ಟಾಟಾ ಫ್ಯಾಕ್ಟರಿಯಲ್ಲಿ ಬೆಂಕಿ

ಅಧಿಕೃತ ದಸರಾ 2024 ವೆಬ್‌ಸೈಟ್ ಅಥವಾ ಮೈಸೂರಿನ ಸ್ಥಳೀಯ ಪ್ರವಾಸೋದ್ಯಮ ಕಚೇರಿಗಳಿಗೆ ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಬಹುದು.

Copyright © All rights reserved Newsnap | Newsever by AF themes.
error: Content is protected !!