ಮಂಡ್ಯ ಜಿಲ್ಲೆಯ ಕೆ ಆರ್. ಪೇಟೆ ಮಂದಗೆರೆ ಬಳಿ ಧಾರವಾಡ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ.
ರೈಲು ಮೈಸೂರಿನಿಂದ ಧಾರವಾಡಕ್ಕೆ ತೆರಳುವ ವೇಳೆ ಮಂದಗೆರೆ ಬಳಿ ರೈಲಿನಲ್ಲಿ ರಾತ್ರಿ 12 ಗಂಟೆ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣವೇ ಚಾಲಕ ಬೆಂಕಿ ಗಮನಿಸಿ ರೈಲನ್ನು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಬೋಗಿಯಿಂದ ಪ್ರಯಾಣಿಕರು ಕೆಳಗಿಳಿದ ಹಿನ್ನೆಲೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆದರೆ ರೈಲಿನಿಂದ ಕೆಳಗೆ ಇಳಿಯುವಾಗ ತಳ್ಳಾಟ ನೂಕಾಟ ನಡೆದಿದ್ದರಿಂದ ಕೆಲ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ತಕ್ಷಣವೇ ರೈಲ್ವೆ ಸಿಬ್ಬಂದಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಒಂದು ಗಂಟೆಗೂ ಹೆಚ್ಚು ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ