ಮೈಸೂರಿನಲ್ಲಿ ನಿರ್ಮಾಣವಾಗಲಿರುವ ಚಿತ್ರನಗರಿಗೆ ಕರ್ನಾಟಕದ ಯುವರತ್ನ ಪುನೀತ್ ರಾಜ್‍ಕುಮಾರ್ ಹೆಸರಿಡಲು ಚಿಂತಿಸಲಾಗಿದೆ. ಈ ಕುರಿತಂತೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಇತ್ತೀಚೆಗೆ ನಮ್ಮನಗಲಿದ ಪುನೀತ್ ರಾಜ್‍ಕುಮಾರ್ ಅವರಿಗೆ ಮೈಸೂರಿನಲ್ಲಿ ದೊಡ್ಡ ವೇದಿಕೆಯಲ್ಲಿ “ನುಡಿನಮನ” ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲು ನಡೆಸಿದ ಪೂರ್ವಭಾವಿ ಸಭೆಯ ನಂತರ ಸಚಿವರು ಈ ವಿಷಯ ಪ್ರಕಟಿಸಿದರು.
ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲು ಉಪಸಮಿತಿಗಳನ್ನು ರಚಿಸಲಾಗುವುದು. ಈ ಸಮಿತಿಗಳು ಚರ್ಚಿಸಿ ನೀಡುವ ಸಲಹೆಯಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲಾಗುವುದು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಹ ಆಹ್ವಾನಿಸಲಾಗುವುದು ಎಂದು ಸಚಿವರು ಹೇಳಿದರು.
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯಲ್ಲಿರುವ ಬಯಲುರಂಗ ಮಂದಿರದಲ್ಲಿ ನುಡಿನಮನ ಕಾರ್ಯಕ್ರಮ ಆಯೋಜಿಸಲಾಗುವುದು.
ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ದಿನಾಂಕ ಪ್ರಕಟಿಸಲಾಗುವುದು. ಕಾರ್ಯಕ್ರಮದಲ್ಲಿ ಪುನೀತ್ ರಾಜ್‍ಕುಮಾರ್ ಕುರಿತು ಪುಸ್ತಕ ಬಿಡುಗಡೆ ಮಾಡಲಾಗುವುದು. ಈ ಪುಸ್ತಕಕ್ಕೆ ಸಾರ್ವಜನಿಕರಿಂದ ಲೇಖನ ಆಹ್ವಾನಿಸಲಾಗುವುದು ಎಂದು ಹೇಳಿದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ