December 27, 2024

Newsnap Kannada

The World at your finger tips!

mysore rape

ಮೈಸೂರು ಗ್ಯಾಂಗ್‌ ರೇಪ್: ಆರೋಪಿಗಳ ವಿರುದ್ದ 1499 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

Spread the love

ಮೈಸೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 6 ಮಂದಿ ಆರೋಪಿಗಳ ವಿರುದ್ಧ 1,499 ಪುಟಗಳಷ್ಟು ದೋಷಾರೋಪ ಪಟ್ಟಿಯನ್ನು ಮೂರನೇ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ

ಬಂಧಿಸಲಾಗಿದ್ದ 7 ಮಂದಿಯ ಪೈಕಿ ಒಬ್ಬ ಆರೋಪಿಯ ಪಾತ್ರ ಘಟನೆಯಲ್ಲಿ ಇಲ್ಲ ಎಂದು ಸಾಬೀತಾಗಿದೆ.

ಆತನನ್ನು ಬಿಟ್ಟು ಉಳಿದ 6 ಮಂದಿಯ ವಿರುದ್ಧ ಆರೋಪಪಟ್ಟಿ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 397, 376 ಬಿ, 109, 120 ಬಿ, 334, 325, 326 ಆರೋಪಿಗಳ ವಿರುದ್ಧ ಹಾಕಲಾಗಿದೆ.

ಬಂಧಿತ ಆರೋಪಿಗಳು ತಮಿಳುನಾಡಿನ ಕೂಲಿ ಕಾರ್ಮಿಕರಾಗಿದ್ದರು.

ಈ ತಂಡ ಆಗಾಗ ಮೈಸೂರಿಗೆ ಬಂದು ಹೋಗುತ್ತಿದ್ದರು. ಮೈಸೂರಿನ ಬಂಡಿಪಾಳ್ಯ ಎಪಿಎಂಸಿಗೆ ತರಕಾರಿ ಕೊಳ್ಳಲು ಬರುವ ಓರ್ವ ಆರೋಪಿ ಚಾಲಕನ ಜೊತೆ ಇನ್ನುಳಿದವರು ಬರುತ್ತಿದ್ದರು. ಬಂದು ಹೋಗುವ ವೇಳೆ ಎಲ್ಲರೂ ಮದ್ಯಪಾನ ಮಾಡಿಯೇ ತೆರಳುತ್ತಿದ್ದರು.

ಲಲಿತಾದ್ರಿಪುರ ಸಮೀಪದ ನಿರ್ಜನ ಪ್ರದೇಶಕ್ಕೆ ಆರು ಮಂದಿ ಆರೋಪಿಗಳು ಕಳೆದ ಆಗಸ್ಟ್ 24ರಂದು ಬಂದಿದ್ದರು.

ಇದೇ ವೇಳೆ ಸ್ಥಳಕ್ಕೆ ಬಂದ ಕಾಲೇಜು ವಿದ್ಯಾರ್ಥಿನಿ ಹಾಗೂ ಸ್ನೇಹಿತ ಏಕಾಂತದಲ್ಲಿ ಇರೋದನ್ನ ನೋಡಿಯೇ ಅಟ್ಯಾಕ್ ಮಾಡಿದ್ದಾರೆ. ಯುವತಿ ಸ್ನೇಹಿತನಿಗೆ ಥಳಿಸಿ ಪೋದೆಯೊಳಗೆ ಸಂತ್ರಸ್ತೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದನ್ನು ಸ್ಮರಿಸಬಹುದು.

Copyright © All rights reserved Newsnap | Newsever by AF themes.
error: Content is protected !!