ಕಳೆದ ಮಂಗಳವಾರ ರಾತ್ರಿ ಮೈಸೂರಿನ ಲಲಿತಾದ್ರಿಪುರ ಬಡಾವಣೆಯಲ್ಲಿ ನಡೆದ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಕೃತ್ಯವೆಸಗಿದ ಸ್ಥಳದಲ್ಲಿ ದುಷ್ಕರ್ಮಿಗಳು ಮದ್ಯ ಸೇವನೆ ಮಾಡಿದ್ದರು. ಹೀಗಾಗಿ ಪೊಲೀಸರು ವೈನ್ ಶಾಪ್ಗಳ ಜಾಡುಹಿಡಿದಿದ್ದಾರಂತೆ.
ಆಲನಹಳ್ಳಿಯ ವೈನ್ಸ್ ಶಾಪ್ನಲ್ಲಿ ಮದ್ಯ ಖರೀದಿಸಿದ್ದ ದೃಶ್ಯದ ಆಧಾರದ ಮೇಲೆ ಪೊಲೀಸರು ಸದ್ಯ ಮೂವರು ಶಂಕಿತರನ್ನು ಬಂಧಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಹತ್ತಕ್ಕೂ ಹೆಚ್ಚು ತನಿಖಾ ತಂಡಗಳನ್ನು ರಚಿಸಿದ್ದಾರೆ ಎನ್ನಲಾಗಿದೆ.
ಇನ್ನು ಇಂದು ಗೃಹ ಸಚಿವರು ಹಾಗೂ ಮಹಿಳಾ ಆಯೋಗದ ಅಧಿಕಾರಿಗಳು ಮೈಸೂರಿಗೆ ಭೇಟಿ ನೀಡಲಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು