December 22, 2024

Newsnap Kannada

The World at your finger tips!

yaduvir nomination

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ನಾಮಪತ್ರ ಸಲ್ಲಿಕೆ

Spread the love

ಮೈಸೂರು : ಇಂದು ಪಕ್ಷದ ಮುಖಂಡರು, ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಾಮಪತ್ರ ಸಲ್ಲಿಸಿದ್ದಾರೆ.

ಮೆರವಣಿಗೆಯು ಅರಮನೆ ಮುಂಭಾಗದ ಕೋಟೆ ಆಂಜನೇಯಸ್ವಾಮಿ ದೇಗುಲದ ಮುಂಭಾಗದಿಂದ ಆರಂಭಗೊಂಡು ,ನಜರಬಾದ್ ಮಾರ್ಗವಾಗಿ ಸಿದ್ಧಾರ್ಥ ನಗರದ ಹೊಸ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಸಂಸದ ಪ್ರತಾಪ ಸಿಂಹ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.‌ ದೇವೇಗೌಡ, ಕ್ಷೇತ್ರದ ಚುನಾವಣಾ ಉಸ್ತುವಾರಿ ಡಾ. ಸಿ.ಎನ್. ಅಶ್ವತ್ಥನಾರಾಯಣ,ಶಾಸಕ ಟಿ.ಎಸ್. ಶ್ರೀವತ್ಸ, ಜೆಡಿಎಸ್ ಶಾಸಕ ಜಿ.ಡಿ.‌ ಹರೀಶ್ ಗೌಡ, ಮಾಜಿ‌ ಶಾಸಕ ಕೆ.ಜಿ. ಬೋಪಯ್ಯ ಉಪಸ್ಥಿತರಿದ್ದರು.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನೂರಾರು ಕಾರ್ಯಕರ್ತರು ವಿವಿಧ ಕಲಾ ತಂಡಗಳೊಂದಿಗೆ ಹೆಜ್ಜೆ ಹಾಕಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!