ಮೈಸೂರಿನ ಉದಯಗಿರಿಯ ಗೌಸಿಯಾನಗರದ ಮನೆಯಲ್ಲಿ ಇಳಿ ವಯಸ್ಸಿನ ವೃದ್ಧರು ಸತಿಪತಿಗಳಾಗಿದ್ದಾರೆ.
ಕುಟುಂಬಸ್ಥರ ಸಮ್ಮುಖದಲ್ಲಿ ಗೌಸಿಯಾನಗರದ ಹಾಜಿ ಮುಸ್ತಫಾ (85) ಹಾಗೂ ಫಾತಿಮಾ ಬೇಗಂ (65) ಬಾಳಸಂಗಾತಿಯಾದರು
ಕುರಿ ಸಾಕಾಣಿಕೆ ಮಾಡಿಕೊಂಡೇ 9 ಮಕ್ಕಳಿಗೆ ಮದುವೆ ಮಾಡಿ ಜೀವನದಲ್ಲಿ ಆರ್ಥಿಕವಾಗಿ ನೆರವು ನೀಡಿದಗೌಸಿಯಾನಗರದ ಮುಸ್ತಫಾ ಎರಡು ವರ್ಷಗಳ ಹಿಂದೆ ಪತ್ನಿ ಖುರ್ಷಿದ್ ಬೇಗಂ ರನ್ನ ಕಳೆದುಕೊಂಡರು.
ಮಕ್ಕಳಿಗೆ ಮದುವೆ ಮಾಡಿದ್ದರಿಂದ ಒಂಟಿ ಜೀವನ ಸಾಗಿಸುತ್ತಿದ್ದರು. ಇಳಿ ವಯಸ್ಸಿನಲ್ಲಿ ಸಾಥ್ ಬೇಕು ಎಂದು ಮನಸ್ಸು ಕೇಳಿದೆ ತನಗೊಂದು ಜೊತೆಗಾತಿ ಬೇಕು ಎಂದು ನಿರ್ಧರಿಸಿದ ಮುಸ್ತಫಾಗೆ ಗೌಸಿಯಾನಗರದಲ್ಲೇ ಒಂಟಿ ಜೀವನ ಸಾಗಿಸುತ್ತಿದ್ದ 65 ವರ್ಷದ ವೃದ್ದೆ ಫಾತಿಮಾ ಬೇಗಂ ಕಣ್ಣಿಗೆ ಬಿದ್ದಿದ್ದಾರೆ.
ತನಗೆ ಜೊತೆಗಾತಿಯಾಗುವಂತೆ ಮುಸ್ತಫಾ ಬೇಡಿಕೆ ನಿರಾಕರಿಸದ ಫಾತಿಮಾ ಬೇಗಂ ಒಪ್ಪಿಕೊಂಡರು
ಮುಸ್ತಫಾ ರವರ ಇಡೀ ಕುಟುಂಬ
ತಂದೆಯ ನಿರ್ಧಾರವನ್ನು ಸ್ವಾಗತಿಸಿ ನಿಖಾಗೆ ದಿನಾಂಕ ಫಿಕ್ಸ್ ಮಾಡಿದ್ದಾರೆ.
ಗೌಸಿಯಾನಗರದ ತಮ್ಮ ಮನೆಯಲ್ಲಿ ತಮ್ಮ ಮಕ್ಕಳು ಹಾಗೂ ಮೊಮ್ಮಕ್ಕಳ ಸಮ್ಮುಖದಲ್ಲಿ ಮುಸ್ತಫಾ ರವರು ಫಾತಿಮಾಬೇಗಂ ರನ್ನ ವರಿಸಿದ್ದಾರೆ. ಇಳಿ ವಯಸ್ಸಿನಲ್ಲಿ ತನಗೊಂದು ಆಸರೆ ಬೇಕೆಂದು ಬಯಸಿದ ಮುಸ್ತಫಾ ಆಸೆಯನ್ನು ಫಾತಿಮಾ ಬೇಗಂ ಈಡೇರಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ