Karnataka

facebook ಲೈವ್ ನಲ್ಲಿ ಭಾವುಕರಾದ ಮೈಸೂರು ಹಾಲಿ ಸಂಸದ ಸಿಂಹ

ಮೈಸೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಸಂಸದ ಪ್ರತಾಪ್‌ ಸಿಂಹ (Pratap Simha) ಅವರು ಫೇಸ್‌ಬುಕ್‌ನಲ್ಲಿ ( facebook ) ಲೈವ್‌ನಲ್ಲಿ ಹಲವು ವಿಚಾರಗಳನ್ನು ತಿಳಿಸಿ ಭಾವುಕರಾಗಿದ್ದಾರೆ.

ಮೈಸೂರಲ್ಲಿ (Mysuru) ರಾಜಕಾರಣ ಮಾಡುವುದು ಬಹಳ ಕಷ್ಟ . ರಾಜರ ಊರು ಅಂದಮೇಲೆ ಚಾಡಿಕೋರರು, ಹೊಗಳುಭಟ್ಟರು ಎಲ್ಲರೂ ಇರುತ್ತಾರೆ. ಸಿದ್ದಾಂತ ಬೇರೂರುವುದು ತುಂಬಾ ಕಷ್ಟ.

ಮೈಸೂರಿನಲ್ಲಿ 1989ರಿಂದ ಸತತವಾಗಿ ಎರಡನೇ ಬಾರಿ ಯಾರನ್ನೂ ಗೆಲ್ಲಿಸಿಲ್ಲ ಆದರೆ ಜನ ನನ್ನನ್ನು ಗೆಲ್ಲಿಸಿದ್ದಾರೆ.

ಜನರಿಗೆ ಅವರ ಮನೆ ಬಾಗಿಲು ಕಾಯುವವರು ಬೇಕು. ಜನರು ಹೋಗಿ ಬಾಗಿಲು ಕಾಯುವರು ಅವರಿಗೆ ಬೇಡ. ಮೈಸೂರಿನಲ್ಲಿ ಎರಡು ಬಾರಿ ರಾಜವಂಶಸ್ಥರನ್ನು ಸೋಲಿಸಿದ್ದಾರೆ. ಆದರೆ ನಾನೊಬ್ಬನನ್ನು ಮಾತ್ರ 40 ವರ್ಷಗಳಲ್ಲಿ ಸತತ ಎರಡು ಬಾರಿ ಗೆಲ್ಲಿಸಿದ್ದಾರೆ.

ತಾಯಿ ಚಾಮುಂಡೇಶ್ವರಿ ನನ್ನ ಟಿಕೆಟ್ ಬಗ್ಗೆ ನಿರ್ಧಾರ ಮಾಡುತ್ತಾಳೆ. ನನಗೆ ಟಿಕೆಟ್ ಕೊಟ್ಟರೆ ನಾನು 3 ಲಕ್ಷ ಅಂತರದಿಂದ ಗೆಲ್ಲುತ್ತೇನೆ. ಕಾರ್ಯಕರ್ತರು ನನ್ನ ಪರ ನಿಂತಿದ್ದಾರೆ. ಈಶ್ವರಪ್ಪ ಅಭಿಪ್ರಾಯ ಸಂಗ್ರಹಕ್ಕೆ ಬಂದಾಗ ನನ್ನ ಹೆಸರನ್ನೇ ಕಾರ್ಯಕರ್ತರು ಸೂಚಿಸಿದ್ದಾರೆ.

ನನಗೆ ಟಿಕೆಟ್ ಸಿಗುವ ವಿಶ್ವಾಸ ಇದೆ. ಬೇರೆ ಯಾವ ಕ್ಷೇತ್ರದಲ್ಲೂ ಸಂಸದರಿಗೆ ಟಿಕೆಟ್ ಕೊಡಿ ಎಂದು ಕಾರ್ಯಕರ್ತರು ಹೇಳಿಲ್ಲ. ನನ್ನ ಕ್ಷೇತ್ರದ ಕಾರ್ಯಕರ್ತರು ಹೇಳಿದ್ದಾರೆ.

ನನಗೆ ಸಿಕ್ಕಿದ ಪ್ರೀತಿ ವಿಶ್ವಾಸ ಎಷ್ಟು ಜನ ಸಂಸದರಿಗೆ ಸಿಕ್ಕಿದೆ? ಎಷ್ಟೋ ಸಂಸದರಿಗೆ ಅವರ ಕ್ಷೇತ್ರದಲ್ಲೇ ಪ್ರೀತಿ ಸಿಕ್ಕಿಲ್ಲ. ನನಗೆ ಕ್ಷೇತ್ರ ಮೀರಿ ಪ್ರೀತಿ ಸಿಕ್ಕಿದೆ.

ನನ್ನ ಜೀವನದಲ್ಲಿ ವಿಜಯ ಸಂಕೇಶ್ವರ್ ಅವರ ಪಾತ್ರ ದೊಡ್ಡದಿದೆ. ನಾನು ಎಲ್ಲರಿಗೂ ಸಲ್ಲುವ ಸಂಸದನಾಗಿ ಕೆಲಸ ಮಾಡಿದ್ದೇನೆ. ರಾಜಕೀಯದಲ್ಲಿ ದ್ವೇಷ ಅಸೂಯೇ ಸಹಜ. ಈ ಹತ್ತು ವರ್ಷದಲ್ಲಿ ಮೋದಿಯವರ ಹೆಸರಿಗೆ ಕಳಂಕ ತಂದಿಲ್ಲ. ಇದೇ ಕೊನೇ ಚುನಾವಣೆ ಅಂತ ಹೇಳಿದ್ದೆ. ನನ್ನಂಥ ಇನ್ಬೊಬ್ಬ ಯುವಕನನ್ನು ಬೆಳೆಸಿ ಅಂತ ಹಾಗೆ ಹೇಳಿದ್ದೆ.

ನ್ನ ಕೆಲಸ ನೋಡಿ ಜನ ಸಾಮಾಜಿಕ ಮಾಧ್ಯಮದಲ್ಲಿ ಬೆಂಬಲಕ್ಕೆ ನಿಂತಿದ್ದಾರೆ ಸಾಕು. ನಿಮ್ಮ ಹೃದಯದಲ್ಲಿ ನನಗೆ ಸ್ಥಾನ ಕೊಟ್ಟಿದ್ದೀರಿ. 28 ವಿಧಾನ ಸಭಾ ಕ್ಷೇತ್ರದಲ್ಲಿ ಯಾವ ಎಂಪಿ ಪರವಾಗಿ ಜನ ನಿಂತಿಲ್ಲ , ನನ್ನ ಪರವಾಗಿ ನಿಂತಿದ್ದಾರೆ.

ದೇವರು ಆಶೀರ್ವಾದ ಇದ್ದರೆ ಮೂರನೇ ಬಾರಿಗೆ ನಿಮ್ಮ ಸೇವೆ ಮಾಡುತ್ತೇನೆ. ಕೊಡಗಿಗೆ ಎರಡು ಅವಧಿಯಲ್ಲಿ ಸ್ವಲ್ಪ ಕಡಿಮೆ ಕೆಲಸ ಮಾಡಿದ್ದೆ. ಕೊಡಗಿನ ಋಣ ತೀರಿಸಬೇಕಿದೆ. ಆ ಕೆಲಸವನ್ನು ಮೂರನೇ ಬಾರಿಯ ಅವಧಿಯಲ್ಲಿ ಮಾಡುತ್ತೇನೆ.

ನಿಮ್ಮ ನಿಮ್ಮ ಸೋಲಿಗೆ ನೀವೇ ಕಾರಣರು. ಅದಕ್ಕೆ ಪ್ರತಾಪ್ ಸಿಂಹ ನನ್ನು ಯಾಕೆ ಹೊಣೆ ಮಾಡ್ತಿರಾ?.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಟಿಕೆಟ್ ಸಿಗುತ್ತೋ ಬಿಡುತ್ತೋ ಆ ವಿಚಾರ ಬಿಡಿ ಆದರೆ ನೀವು ನನಗೆ ನಿಮ್ಮ ಹೃದಯದಲ್ಲಿ ಸ್ಥಾನ ಕೊಟ್ಟಿದ್ದಿರಲ್ಲ ಅಷ್ಟೆಸಾಕು ಎಂದು ಭಾವುಕರಾಗಿದ್ದಾರೆ.

Team Newsnap
Leave a Comment

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024