ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶನಿವಾರ ಬೆಳಿಗ್ಗೆ ವಿಧ್ಯುಕ್ತ ಚಾಲನೆ ದೊರೆಯಿತು.
ಈ ಬಾರಿಯ ದಸರಾ ಮಹೋತ್ಸವದ ಉದ್ಘಾಟಕರಾಗಿ ಆಗಮಿಸಿದ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಬೆಳ್ಳಿ ತೇರಿನಲ್ಲಿನ ಚಾಮುಂಡೇಶ್ವರಿ ಮೂರ್ತಿಗೆ ಬೆಳಿಗ್ಗೆ 7:45ರ ಶುಭ ಮುಹೂರ್ತದಲ್ಲಿ ಚಾಲನೆ ನೀಡಿದರು.
ದಸರಾ ಮಹೋತ್ಸವ ಚಾಲನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಬಿ.ಸಿ. ಪಾಟೀಲ್ ಸಮಾರಂಭದಲ್ಲಿದ್ದರು.
ಕೊರೋನಾ ಹಿನ್ನಲೆಯಲ್ಲಿ ಬಾರಿಯ ದಸರಾ ಮಹೋತ್ಸವವನ್ನು ಆದಷ್ಟು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸುವಿಕೆಯಂತಹ ಮುಂಜಾಗ್ರತ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನ ಮೇರೆಗೆ ಕೇವಲ ಆದಷ್ಟು ಕಡಿಮೆ ಸಂಖ್ಯೆಯಲ್ಲಿ ಜನರನ್ನು ಆಹ್ವಾನಿಸಲಾಗುತ್ತಿದೆ.
ರಾಣಿ ಪ್ರಮೋದಾ ದೇವಿಯವರು ಸಹ ಕೊರೋನಾ ಬಗ್ಗೆ ಜಾಗೃತಿ ಮೂಡಿಸಲು ಈ ಬಾರಿಯ ಶರನ್ನವರಾತ್ರಿಯನ್ನು ಸರಳವಾಗಿ ಆಚರಣೆ ಮಾಡಲು ನಿರ್ಧರಿಸಿದ್ದಾರೆ.
ದಸರಾ ಮಹೋತ್ಸವಕ್ಕೆ ಚಾಲನೆ ದೊರೆತ ನಂತರ ಕೋವಿಡ್ ಸಂದರ್ಭದಲ್ಲಿ ಸಮರ್ಥವಾಗಿ ವೈದ್ಯಕೀಯ ಸೇವೆ ನೀಡಿದ ಕೊರೋನಾ ವಾರಿಯರ್ಸ್‌ಗೆ ಅಭಿನಂದಿಸಿ ಸನ್ಮಾನಿಸಲಾಯಿತು.
ಶಾಸಕರಾದ ಜಿ.ಟಿ. ದೇವೇಗೌಡ, ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಸಂಸದ ಪ್ರತಾಪ ಸಿಂಹ ಪೂಜೆಯಲ್ಲಿ ಭಾಗವಹಿಸಿದ್ದರು. ವಿಧ್ಯುಕ್ತ ಚಾಲನೆ ನೀಡಿದ ಬಳಿಕ ಡಾ.ಸಿ.ಎನ್. ಮಂಜುನಾಥ್ ಉದ್ಘಾಟನಾ ಭಾಷಣ ಮಾಡಿದರು.
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ