Trending

ವಿಶ್ವವಿಖ್ಯಾತ ಮೈಸೂರು ದಸರಾಗೆ ಡಾ. ಮಂಜುನಾಥ್ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶನಿವಾರ ಬೆಳಿಗ್ಗೆ ವಿಧ್ಯುಕ್ತ ಚಾಲನೆ ದೊರೆಯಿತು.

ಈ ಬಾರಿಯ ದಸರಾ ಮಹೋತ್ಸವದ ಉದ್ಘಾಟಕರಾಗಿ ಆಗಮಿಸಿದ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಬೆಳ್ಳಿ ತೇರಿನಲ್ಲಿನ ಚಾಮುಂಡೇಶ್ವರಿ ಮೂರ್ತಿಗೆ ಬೆಳಿಗ್ಗೆ 7:45ರ ಶುಭ ಮುಹೂರ್ತದಲ್ಲಿ‌ ಚಾಲನೆ ನೀಡಿದರು.

ದಸರಾ ಮಹೋತ್ಸವ ಚಾಲನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಬಿ.ಸಿ. ಪಾಟೀಲ್ ಸಮಾರಂಭದಲ್ಲಿದ್ದರು.

ಕೊರೋನಾ ಹಿನ್ನಲೆಯಲ್ಲಿ ಬಾರಿಯ ದಸರಾ ಮಹೋತ್ಸವವನ್ನು ಆದಷ್ಟು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿ ಧರಿಸುವಿಕೆಯಂತಹ ಮುಂಜಾಗ್ರತ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನ‌ ಮೇರೆಗೆ ಕೇವಲ ಆದಷ್ಟು ಕಡಿಮೆ ಸಂಖ್ಯೆಯಲ್ಲಿ ಜನರನ್ನು ಆಹ್ವಾನಿಸಲಾಗುತ್ತಿದೆ.

ರಾಣಿ ಪ್ರಮೋದಾ ದೇವಿಯವರು ಸಹ ಕೊರೋನಾ ಬಗ್ಗೆ ಜಾಗೃತಿ‌ ಮೂಡಿಸಲು ಈ ಬಾರಿಯ ಶರನ್ನವರಾತ್ರಿಯನ್ನು ಸರಳವಾಗಿ ಆಚರಣೆ ಮಾಡಲು ನಿರ್ಧರಿಸಿದ್ದಾರೆ.

ದಸರಾ ಮಹೋತ್ಸವಕ್ಕೆ ಚಾಲನೆ ದೊರೆತ ನಂತರ ಕೋವಿಡ್ ಸಂದರ್ಭದಲ್ಲಿ ಸಮರ್ಥವಾಗಿ ವೈದ್ಯಕೀಯ‌ ಸೇವೆ ನೀಡಿದ ಕೊರೋನಾ ವಾರಿಯರ್ಸ್‌ಗೆ ಅಭಿನಂದಿಸಿ ಸನ್ಮಾನಿಸಲಾಯಿತು.

ಶಾಸಕರಾದ ಜಿ.ಟಿ. ದೇವೇಗೌಡ, ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಸಂಸದ ಪ್ರತಾಪ ಸಿಂಹ ಪೂಜೆಯಲ್ಲಿ ಭಾಗವಹಿಸಿದ್ದರು. ವಿಧ್ಯುಕ್ತ ಚಾಲನೆ ನೀಡಿದ ಬಳಿಕ‌ ಡಾ.ಸಿ.ಎನ್‌. ಮಂಜುನಾಥ್ ಉದ್ಘಾಟನಾ ಭಾಷಣ ಮಾಡಿದರು.

Team Newsnap
Leave a Comment
Share
Published by
Team Newsnap

Recent Posts

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024