ಮಹಾನಗರ ಪಾಲಿಕೆ ಮೇಯರ್- ಉಪ ಮೇಯರ್ ಚುನಾವಣೆ ಕ್ಷಣಕ್ಷಣಕ್ಕೂ ತಿರುವು ಪಡೆಯುತ್ತಿದೆ. ತೀವ್ರ ಕುತೂಹಲ ಕೆರಳಿಸಿದೆ.
ಕೊನೇ ಹಂತದಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆಗೆ ಮುಂದಾಗಿ ಅಚ್ಚರಿ ಮೂಡಿಸಿದೆ.
ಕಳೆದ ರಾತ್ರಿ ಡಿ.ಕೆ ಶಿವಕುಮಾರ್ ಅಖಾಡಕ್ಕಿಳಿದು ಜೆಡಿಎಸ್ ಜೊತೆ ಮೈತ್ರಿ ಮುಂದುವರೆಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿತ್ತು.
ಆದರೆ ನಂತರದ ಬೆಳವಣಿಗೆಯಲ್ಲಿ ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷಗಳಿಂದ ಅಂತರ ಕಾಯ್ದುಕೊಂಡ ಜೆಡಿಎಸ್, ಪಕ್ಷೇತರರ ಸಹಾಯದಿಂದ ಅಧಿಕಾರ ಹಿಡಿಯಲು ಕಾರ್ಯತಂತ್ರ ರೂಪಿಸಿತ್ತು.
ಕೊನೆ ಕ್ಷಣದಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ.
ಮೂರು ಪಕ್ಷದವರೂ ನಾಮಪತ್ರ ಸಲ್ಲಿಕೆ:
- ಜೆಡಿಎಸ್ನಿಂದ ಮೇಯರ್ ಸ್ಥಾನಕ್ಕೆ ರುಕ್ಮಿಣಿ ಮಾದೇಗೌಡ ಹಾಗೂ ಉಪಮೇಯರ್ ಸ್ಥಾನಕ್ಕೆ ಶಮಿಯುಲ್ಲಾ ನಾಮಪತ್ರ ಸಲ್ಲಿಸಿದ್ದಾರೆ.
- ಬಿಜೆಪಿಯಿಂದ ಮೇಯರ್ ಅಭ್ಯರ್ಥಿ ಸುನಂದಾ ಪಾಲನೇತ್ರ ಹಾಗೂ ಉಪಮೇಯರ್ ಅಭ್ಯರ್ಥಿ ಸಾತ್ವಿಕ್ ಸಂದೇಶ್
- ಕಾಂಗ್ರೆಸ್ನಿಂದ ಮೇಯರ್ ಅಭ್ಯರ್ಥಿ ಶಾಂತಕುಮಾರಿ ಹಾಗೂ ಉಪ ಮೇಯರ್ ಅಭ್ಯರ್ಥಿ ಅನ್ವರ್ ಬೇಗ್ ಉಮೇದುವಾರಿಕೆ ಸಲ್ಲಿಸಿದ್ದಾರೆ.
More Stories
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ