ನನಗೆ ಕೆಲವರು ಕೆಲಸ ಮಾಡಲು ಬಿಡಲಿಲ್ಲ. ಅನಗತ್ಯವಾಗಿ ತೊಂದರೆ ಕೊಟ್ಟರು. ಭೂಮಿ ಒತ್ತುವರಿ ತೆರವು ಮಾಡಲು ನಾನು ಪ್ರಯತ್ನ ಮಾಡಿದ್ದೆ ಎಂದು ಭೂ ಮಾಫಿಯಾ ಕುತಂತ್ರ ಕುರಿತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.
ವರ್ಗಾವಣೆ ಬೆನ್ನಲ್ಲೇ ಸುದ್ದಿಗಾರರ ಜೊತೆ ಮಾತನಾಡಿದ. ರೋಹಿಣಿ, ಕೆರೆಗಳನ್ನು ಉಳಿಸೋದು, ಸರ್ಕಾರಿ ಭೂಮಿ ರಕ್ಷಣೆ ಮಾಡೋದು ನನ್ನ ಆದ್ಯತೆ ಆಗಿತ್ತು. ಆ ನಿಟ್ಟಿನಲ್ಲಿ ಮೊದಲ ದಿನದಿಂದಲೂ ಕಾರ್ಯ ನಿರ್ವಹಿಸುತ್ತಿದ್ದೆ ಎಂದರು.
ಕೇರ್ಗಳ್ಳಿ ಕೆರೆಯ ಒತ್ತುವರಿ ತೆರವು ಮಾಡಿ ನೀರು ತುಂಬಿಸಲು ಪ್ರಯತ್ನಿಸಿದ್ದೆ. ಅದರ ಜತೆಗೆ ಸರ್ವೇ ನಂ. 4ರ 1500 ಎಕರೆ ಜಾಗ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್‌ನಲ್ಲೂ ಒಳ್ಳೆಯ ವಕೀಲ ರನ್ನು ಇಟ್ಟು ಹೋರಾಟ ಮಾಡುತ್ತಿದ್ದೇವೆ ಎಂದರು.
ಕೋವಿಡ್ ನಿಯಂತ್ರಣಕ್ಕೂ ಪ್ರಾಮುಖ್ಯತೆ ಕೊಟ್ಟು ಕೆಲಸ ಮಾಡಿದ್ದೇನೆ. ವ್ಯಾಕ್ಸಿನೇಷನ್‌ನಲ್ಲಿ ಮೈಸೂರು ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಜುಲೈ ವೇಳೆಗೆ ಮೈಸೂರನ್ನು ಕೊರೊನಾ ಮುಕ್ತ ಅಂತ ಘೋಷಣೆ ಮಾಡಬೇಕು ಅನ್ನುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.
ಮೈಸೂರಿನ ಜನ ನನ್ನನ್ನು ಮನೆ ಮಗಳಂತೆ ಕಂಡಿದ್ದಾರೆ. ತವರು ಮನೆ ಬಿಟ್ಟು ಹೋಗುವ ಭಾವನೆ ನನಗೆ ಆಗುತ್ತಿದೆ. ಮೈಸೂರು ಜನತೆಗೆ ನನ್ನ ಧನ್ಯವಾದಗಳು. ಗಾಂಧೀಜಿ ಹೇಳಿದಂತೆ ನನ್ನ ಕೆಲಸದ ಮೂಲಕವೇ ಉತ್ತರ ಕೊಡ್ತೀನಿ ಎಂದು ಹೇಳಿದರು.
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )