ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಭೇಟಿಗೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಿದ್ದಾರೆ.
ದಸರಾ ಉದ್ಘಾಟನಾ ವೇದಿಕೆಯಲ್ಲೇ ಈ ಘೋಷಣೆಯನ್ನು ಉಸ್ತುವಾರಿ ಸಚಿವರು ಮಾಡಿದ್ದಾರೆ. ಅಕ್ಟೋಬರ್ 17ರಿಂದ ನವೆಂಬರ್ 1ರವರೆಗೆ ಈ ನಿರ್ಬಂಧ ವಿಧಿಸಲಾಗಿತ್ತು.
ಇಂದಿನಿಂದ ನವೆಂಬರ್ 1ರವರೆಗೆ ನಿರ್ಬಂಧ ವಿಧಿಸಲಾಗಿತ್ತು. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಿರ್ಬಂಧ ವಿಧಿಸಿ ಆದೇಶ ಮಾಡಿದ್ದರು. ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ನಂಜನಗೂಡು ದೇವಾಲಯಕ್ಕೆ ನಿರ್ಬಂಧ ಹಾಕಲಾಗಿತ್ತು. ಕೆ.ಆರ್.ಎಸ್ ಹಾಗೂ ರಂಗನತಿಟ್ಟಿನ ನಿರ್ಬಂಧವನ್ನು ಸಹ ತೆರವು ಮಾಡಲಾಗಿದೆ. ಸಿಎಂ ಬಿ.ಎಸ್. ಯಡಿಯೂರಪ್ಪನವರ ಸೂಚನೆ ಮೇರೆಗೆ ಈ ನಿರ್ಬಂಧ ತೆರವು ಮಾಡಲಾಗಿದೆ.
ಇಂದು ಮೈಸೂರಿನ ಎಲ್ಲಾ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ರೋಹಿಣಿ ನಿರ್ಧಾರಕ್ಕೆ ಹಿನ್ನಡೆಯಾಗಿದೆ.
ಇನ್ನು, ಈ ಬಾರಿಯ ದಸರಾವನ್ನು ವರ್ಚುವಲ್ ದಸರಾವನ್ನಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಮನೆಯಲ್ಲೇ ಕುಳಿತು, ಟಿವಿಯಲ್ಲಿ ದಸರಾ ವೀಕ್ಷಿಸಲು ಕೋರಲಾಗಿದೆ. ಈ ಬಾರಿಯ ದಸರಾ ಉದ್ಘಾಟನೆ ಕಾರ್ಯಕ್ರಮದ ಸ್ವರೂಪ ಬದಲಾಗಿದೆ. ಕೊರೋನಾ ಹಿನ್ನೆಲೆ, ವೈಭವದ ದಸರಾದಲ್ಲಿ ಬೆರಳೆಣಿಕೆಯ ಜನ ಮಾತ್ರ ಕಾಣಿಸುತ್ತಿದ್ದಾರೆ. ಉದ್ಘಾಟನಾ ಕಾರ್ಯಕ್ರಮಕ್ಕೆ 200 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಚಾಮುಂಡಿಬೆಟ್ಟದ ಕೆಳಭಾಗದಲ್ಲಿ ಪೊಲೀಸ್ ಇಲಾಖೆ ಪರಿಶೀಲಿಸಿ ಅನುಮತಿಸಿದ 200 ಮಂದಿ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ತಾಂತ್ರಿಕ ಸಲಹಾ ಸಮಿತಿ ನೀಡಿರುವ ನಿಯಮದಂತೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಈ ಬಾರಿಯ ದಸರಾ ಉದ್ಘಾಟನೆ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ಇರಲಿಲ್ಲ. ವರ್ಚುವಲ್ ವಿಡಿಯೋ ಮೂಲಕ ಆನ್‌ಲೈನ್‌ನಲ್ಲಿ ನೇರ ಪ್ರಸಾರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ