ದಾವಣಗೆರೆ: ನ್ಯಾಕ್ ಮೌಲ್ಯಮಾಪನದಲ್ಲಿ ಎ++ ಗ್ರೇಡ್ ನೀಡಲು ಲಂಚ ಸ್ವೀಕರಿಸಿದ್ದಕ್ಕಾಗಿ ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೋ ಬಯೋಲಜಿ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ 10 ಜನರನ್ನು ಕೇಂದ್ರ ತನಿಖಾ ದಳ (CBI) ಬಂಧಿಸಿದೆ.
ಬಂಧಿತರಲ್ಲಿ ನ್ಯಾಕ್ (NAAC) ತಂಡದ ಅಧ್ಯಕ್ಷರು, JNU ಪ್ರೊಫೆಸರ್, ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ಅಧಿಕಾರಿಗಳು ಸೇರಿದ್ದಾರೆ. ಆಂಧ್ರಪ್ರದೇಶದ ಗುಂಟೂರಿನ ಕೆಎಲ್‌ಇಎಫ್ ವಿಶ್ವವಿದ್ಯಾಲಯಕ್ಕೆ ನ್ಯಾಕ್ ಗ್ರೇಡ್ ನೀಡುವ ಪ್ರಕ್ರಿಯೆಯಲ್ಲಿ ಲಂಚ ಪಡೆಯಲಾಗಿದೆ ಎಂಬ ಆರೋಪ ಹೊರಿಸಲಾಗಿದೆ.
ಸಿಬಿಐ ಈ ಭ್ರಷ್ಟಾಚಾರ ಸಂಬಂಧಿತ ತನಿಖೆಯನ್ನು ಮುಂದುವರಿಸುತ್ತಿದ್ದು, ಚೆನ್ನೈ, ಬೆಂಗಳೂರು, ವಿಜಯವಾಡ, ಪಲಮು, ಸಂಬಲ್‌ಪುರ, ಭೋಪಾಲ್, ಬಿಲಾಸ್‌ಪುರ, ಗೌತಮ್ ಬುದ್ಧ ನಗರ, ಹಾಗೂ ನವದೆಹಲಿ ಸೇರಿ ದೇಶದ ವಿವಿಧ 20 ಸ್ಥಳಗಳಲ್ಲಿ ದಾಳಿ ನಡೆಸಿದೆ.ಇದನ್ನು ಓದಿ –ಮನ್ಮುಲ್ ಫಲಿತಾಂಶ: ಕಾಂಗ್ರೆಸ್ ಅಧಿಕಾರಕ್ಕೆ ; 3 ತಾಲೂಕುಗಳ ಫಲಿತಾಂಶಕ್ಕೆ ತಡೆ
ಈ ದಾಳಿಯ ವೇಳೆ ₹37 ಲಕ್ಷ ನಗದು, 6 ಲ್ಯಾಪ್‌ಟಾಪ್‌ಗಳು, ಐಫೋನ್ 16 ಪ್ರೊ, ಚಿನ್ನದ ನಾಣ್ಯಗಳು, ಹಾಗೂ ವಿವಿಧ ಮಹತ್ವದ ದಾಖಲೆಗಳು ವಶಪಡಿಸಿಕೊಳ್ಳಲಾಗಿದೆ. ಸಿಬಿಐ ಈ ಪ್ರಕರಣದ ಬಗ್ಗೆ ಸುವ್ಯವಸ್ಥಿತ ತನಿಖೆ ನಡೆಸುತ್ತಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು