ಬೆಂಗಳೂರು: ಇನ್ನು ಮುಂದೆ ನಾಡಗೀತೆಯನ್ನು ಖಾಸಗಿ ಶಾಲೆಗಳಲ್ಲಿ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ನಾಡಗೀತೆ ಹಾಡುವುದಕ್ಕೆ ಖಾಸಗಿ ಶಾಲೆಗಳಿಗೆ ವಿನಾಯಿತಿ ನೀಡಿ , ಸರ್ಕಾರಿ ಶಾಲೆಗಳು (Govt Schools) ಮತ್ತು ಅನುದಾನಿತ ಶಾಲೆಗಳಲ್ಲಿ (Aided school) ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.
ಈ ಹಿಂದೆ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು.ಜನರು “ಸ್ವಿಟ್ಜರ್ಲೆಂಡ್ ” ಅನ್ನು ಮರೆತುಬಿಡುವಷ್ಟು ಕಾಶ್ಮೀರವನ್ನು ಅಭಿವೃದ್ಧಿಪಡಿಸಲಾಗುವುದು : ಪಿ ಎಂ ಮೋದಿ
ಇದೀಗ ರಾಜ್ಯ ಸರ್ಕಾರ ಹಿಂದಿನ ಆದೇಶವನ್ನು ಬದಲಾವಣೆ ಮಾಡಿ ,ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ