December 25, 2024

Newsnap Kannada

The World at your finger tips!

police 1

ನಾಗಮಂಗಲ ಪತ್ರಕರ್ತ ಮೋಹನ್ ಕುಮಾರ್ ಅಪಘಾತದಲ್ಲಿ ದುರಂತ ಸಾವು

Spread the love

ನಾಗಮಂಗಲ: ಕಾರು- ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಿರಿಯ ಪತ್ರಕರ್ತ ಸಾವನ್ನಪ್ಪಿರುವ ಘಟನೆ ಪಟ್ಟಣದ ತೊಳಲಿ ಗ್ರಾಮದ ಶುಕ್ರವಾರ ಸಂಭವಿಸಿದೆ

ತಾಲೂಕಿನ ಕಸಬಾ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ಸಿ.ಚಂದ್ರಪ್ಪ ಅವರ ಪುತ್ರ ಬಿ.ಸಿ.ಮೋಹನ್ ಕುಮಾರ್(೪೯) ಮೃತಪಟ್ಟ ಪತ್ರಕರ್ತ.

ಕಾರ್ಯನಿಮಿತ್ತ ಬೆಳ್ಳೂರಿಗೆ ತೆರಳಿ ನಾಗಮಂಗಲಕ್ಕೆ ತಮ್ಮ ಕಾರಿನಲ್ಲಿ ಹಿಂದಿರುವಾಗ ಮೈಸೂರಿನಿಂದ ಬೆಳ್ಳೂರು ಕಡೆಗೆ ಹೋಗುತ್ತಿದ್ದ ಲಾರಿಗೆ ಮುಖಾಮುಖಿಯಾಗಿ ಡಿಕ್ಕಿಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡು ಕಾರು ಚಲಾಯಿಸುತ್ತಿದ್ದ ಬಿ.ಸಿ.ಮೋಹನ್ ಕುಮಾರ್ ಅವರಿಗೆ ತೀವ್ರವಾಗಿ ತಲೆಗೆ ಪೆಟ್ಟುಬಿದ್ದಿತ್ತು.

image 18

ಕೂಡಲೇ ಸ್ಥಳೀಯರು ಬಿಜಿ‌ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಪ್ರಜಾವಾಣಿ, ವಿಜಯವಾಣಿ, ಆಂದೋಲನ ಸೇರಿದಂತೆ ಹಲವು ದಿನಪತ್ರಿಕೆಗಳಲ್ಲಿ ತಾಲೂಕು ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಕನ್ನಡಪರ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೆ ಆದ ಕೊಡುಗೆ ನೀಡಿದ್ದಾರೆ.

ಮೃತರು ತಾಯಿ ಪದ್ಮ , ಪತ್ನಿ ಲತಾ ಹಾಗೂ ಸಹೋದರ ಮತ್ತು ಸಹೋದರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಾಜಿ ಶಾಸಕರಾದ ಸುರೇಶ್ ಗೌಡ, ಪಿ.ರಾಮಯ್ಯ ಮತ್ತು ಎನ್.ಅಪ್ಪಾಜಿಗೌಡ, ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.ಕಾರ್ಗಿಲ್ ದಿಗ್ವಿಜಯಕ್ಕೆ ರಜತದ ಸಂಭ್ರಮ

ಶನಿವಾರ ಅಂತ್ಯಕ್ರಿಯೆ:
ಮೃತರ ಹುಟ್ಟೂರಾದ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ೧೧:೩೦ ಕ್ಕೆ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!