ನಟಿ ರಾಗಿಣಿ ದ್ವಿವೇದಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳ್ಳಿಗ್ಗೆ ದಾಳಿ ನಡೆಸಿದ್ದಾರೆ.
ಯಲಹಂಕದ ಅನನ್ಯ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್ ಮೇಲೆ ಬೆಳಗ್ಗೆ 6.34ರ ಸುಮಾರಿಗೆ ಸಿಸಿಬಿ ಅಧಿಕಾರಿಗಳು 2 ಕಾರುಗಳಲ್ಲಿ ಆಗಮಿಸಿ ದಾಳಿ ನಡೆಸಿದ್ದಾರೆ.ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಹೆಚ್ಚಾಗಿದೆ.
ಸ್ಯಾಂಡಲ್ವುಡ್ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ನಿನ್ನೆ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ ನಟಿ ಕಾರಣಗಳನ್ನು ಹೇಳಿ ವಿಚಾರಣೆಗೆ ಹೋಗುವುದನ್ನು ತಪ್ಪಿಸಿದ್ದರು.
ಹೀಗಾಗಿ ನಿನ್ನೆ ವಿಚಾರಣೆಗೆ ಹಾಜರಾಗಿರಲಿಲ್ಲ. ಸಾಕಷ್ಟು ವಿಚಾರಗಳನ್ನು ಮುಚ್ಚಿಡುವ ಮತ್ತು ಸಾಕ್ಷ್ಯಗಳನ್ನು ನಾಶ ಮಾಡುವ ಅನುಮಾನದಿಂದಾಗಿ ನ್ಯಾಯಾಲಯದಲ್ಲಿ ಸರ್ಚ್ ವಾರೆಂಟ್ ಪಡೆದು, ಸಿಸಿಬಿ ಮನೆ ಮೇಲೆ ದಾಳಿ ನಡೆಸಿದೆ.
ಸೋಮವಾರ ಪೋಲಿಸ್ ವಿಚಾರಣೆಗೆ
ಈ ನಡುವೆ ನಟಿ ರಾಗಿಣಿ ಟ್ವಿಟ್ ಮಾಡಿ
ತಾನು ಸೋಮವಾರ ಪೋಲಿಸ್ ವಿಚಾರಣೆ ಗೆ ಹಾಜರಾಗುವುದಾಗಿ ಹೇಳಿದ್ದಾರೆ.
ದೇಶದ ಕಾನೂನಿನ ಬಗ್ಗೆ ಗೌರವ ಇದೆ. ನನಗೆ ತಿಳಿದಿರುವ ಸಂಗತಿ ಯ ಬಗ್ಗೆ ವಿವರ ನೀಡುವುದಾಗಿ ಹೇಳಿದ್ದಾರೆ
More Stories
ಬಿಜೆಪಿ ಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆ: ಹೈಕೋರ್ಟ್ ತಕ್ಷಣ ಬಿಡುಗಡೆಗೆ ಆದೇಶ
ಯೂಟ್ಯೂಬ್ ನೋಡಿ ಬೈಕ್ ಕಳವು ತರಬೇತಿ: 13 ಲಕ್ಷ ಮೌಲ್ಯದ 20 ಬೈಕ್ಗಳ ಕಳ್ಳತನ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ