ಮಾಲ್ನಲ್ಲಿ ಕೆಲವು ಮುಸ್ಲಿಂಮರು ನಮಾಜ್ ಮಾಡುವುದನ್ನು ವಿರೋಧಿಸಿ ಭಜರಂಗದಳದ ಗುಂಪೊಂದು ಹನುಮಾನ್ ಚಾಲೀಸಾವನ್ನು ಪಠಿಸಿ ಪ್ರತಿಭಟನೆ ನಡೆಸಿರುವ ಘಟನೆ ಭೋಪಾಲ್‍ನಲ್ಲಿ ನಡೆದಿದೆ.
ಭೋಪಾಲ್‍ನ ಡಿಬಿ ಮಾಲ್‌ನಲ್ಲಿ ಘಟನೆ ನಡೆದಿದೆ, ಹನುಮಾನ್ ಚಾಲೀಸಾ ಪಠಣ ಹಾಗೂ ನಮಾಜ್ ಮಾಡುತ್ತಿರುವ ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಇದನ್ನು ಓದಿ –ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ 4 ದಿನ ಕಾಲ ಭಾರೀ ಮಳೆ
ವೀಡಿಯೋದಲ್ಲಿ ಭಜರಂಗದಳದ ಕಾರ್ಯಕರ್ತರು ಮೊದಲು ಮುಸ್ಲಿಂ ಸಿಬ್ಬಂದಿ ಪ್ರಾರ್ಥನೆ ಸಲ್ಲಿಸುತ್ತಿರುವ ಜಾಗಕ್ಕೆ ಹೋಗುತ್ತಾರೆ. ಅಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿ, ಈ ಮಾಲ್‍ನಲ್ಲಿ ನಮಾಜ್‍ನ್ನು ಗುಪ್ತವಾಗಿ ಮಾಡುತ್ತಿದ್ದಾರೆ ಎಂದು ಭಜರಂಗದಳ ಕಾರ್ಯಕರ್ತರು ಆರೋಪಿಸಿದರು.
ಬಳಿಕ ಭಜರಂಗದಳ ಕಾರ್ಯಕರ್ತರು ಎಸ್ಕಲೇಟರ್ ಬಳಿ ನೆಲದ ಮೇಲೆ ಕುಳಿತು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾಲ್‌ನ ಆಡಳಿತ ಮಂಡಳಿ ಹಾಗೂ ಭಜರಂಗದಳ ಕಾರ್ಯಕರ್ತರ ನಡುವೆ ವಾಗ್ವಾದಗಳು ನಡೆದವು.
ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಮಾಲ್‍ಗೆ ತೆರಳಿ ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸಿದರು. ಜೊತೆಗೆ ಘಟನೆ ಸಂಬಂಧಿಸಿ ಯಾವುದೇ ಧಾರ್ಮಿಕ ಚಟುವಟಿಕೆಗೆ ಅವಕಾಶ ನೀಡಬಾರದು ಎಂದು ಮಾಲ್ ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ತಿಳಿಸಿದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ