ಅಧಿಕಾರಿಗಳೇ ಸರ್ಕಾರದ ಆದೇಶವನ್ನು ಪಾಲಿಸಿ ಎಂದು ಮಂಡ್ಯದ ಹೊಸಹಳ್ಳಿ ಬಡಾವಣೆಯಲ್ಲಿ ಜನರು ತಮ್ಮ. ಮೀಟರ್ ಬಳಿ ಬರೆದು ಗೋಡೆಗೆ ಅಂಟಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದರಿಂದ ನಾವು ಯಾರೂ 200 ಯೂನಿಟ್‌ವರೆಗೆ ವಿದ್ಯುತ್ ಬಿಲ್ ಕಟ್ಟುವುದಿಲ್ಲ. ವಿದ್ಯುತ್ ಪ್ರಸರಣ ನಿಗಮದ ಅಧಿಕಾರಿಗಳೇ ಸರ್ಕಾರದ ಆದೇಶ ಆಗಿದೆ. 200 ಯೂನಿಟ್‌ವರೆಗೆ ನಮಗೆ ಯಾವುದೇ ಬಿಲ್ಲನ್ನು ನೀಡುವಂತಿಲ್ಲ.
ಸರ್ಕಾರದ ಆದೇಶವನ್ನು ನಾವು ಪಾಲಿಸುತ್ತೇವೆ. ನೀವೂ ಕೂಡ ಪಾಲಿಸಿ. ಹೆಚ್ಚಿನ ಮಾಹಿತಿಗಾಗಿ ನಮ್ಮ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕೇಳಿ ಎಂದು ಬರೆದು ಗೋಡೆಗೆ ಅಂಟಿಸಿದ್ದಾರೆ.
ಈಗಾಗಲೇ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಘೋಷಣೆ ಮಾಡಿದೆ, ಆದರೆ ಷರತ್ತುಗಳು ಅನ್ವಯವಾಗಲಿವೆ ಎಂದು ಸಂಬಂಧಿಸಿದ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಮಾರ್ಗಸೂಚಿ ಮಾತ್ರ ಬಿಡುಗಡೆಯಾಗಬೇಕಿದೆ. ನಂತರವಷ್ಟೇ ಇದು ಯಾವ ರೀತಿಯಲ್ಲಿ ಜಾರಿಗೊಳ್ಳುತ್ತದೆ ಎಂಬ ಸ್ಪಷ್ಟ ಚಿತ್ರಣ ದೊರೆಯಲಿದೆ.ನಟ, ಮಾಡೆಲ್ ‘ಆದಿತ್ಯ ಸಿಂಗ್ ರಜಪೂತ್’ ಶವವಾಗಿ ಪತ್ತೆ
ಅದಕ್ಕೂ ಮುನ್ನ ಜನತೆ ಕರೆಂಟ್ ಬಿಲ್ ಕಟ್ಟಲ್ಲ ಎಂದು ಹೇಳುತ್ತಿರುವುದರಿಂದ ವಿದ್ಯುತ್ ಇಲಾಖೆಯವರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು