November 16, 2024

Newsnap Kannada

The World at your finger tips!

namma metro

ರಾಮನಗರಕ್ಕೆ ‘ನಮ್ಮ ಮೆಟ್ರೋ ‘ – BMRCL ನಿಂದ ಟೆಂಡರ್ ಕರೆ

Spread the love

ಬೆಂಗಳೂರು: BMRCL ರಾಮನಗರ ಜಿಲ್ಲೆಯ ಬಿಡದಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವ ಕುರಿತು ಮೊದಲ ಹೆಜ್ಜೆ ಇಟ್ಟಿದ್ದು , ಇದಕ್ಕಾಗಿ ವರದಿ ತಯಾರು ಮಾಡಲು ಟೆಂಡರ್ ಸಹ ಕರೆದಿದೆ.

ರಾಮನಗರಕ್ಕೆ ನಮ್ಮ ಮೆಟ್ರೋ ರೈಲು ಸಂಚಾರ ನಡೆಸಲಿದೆ ಎಂಬ ಮಾತು ಹಲವು ದಿನಗಳಿಂದ ಕೇಳಿ ಬರುತ್ತಿದ್ದು ,ರಾಮನಗರ ಜಿಲ್ಲೆಯ ಬಿಡದಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವ ಕುರಿತು ಬಿಎಂಆರ್‌ಸಿಎಲ್ ಮೊದಲ ಹೆಜ್ಜೆ ಇಟ್ಟಿದೆ.

ಮೂರು ಮಾರ್ಗದಲ್ಲಿ ನಮ್ಮ ಮೆಟ್ರೋ ಯೋಜನೆಯನ್ನು ವಿಸ್ತರಣೆ ಮಾಡಲು ಕಾರ್ಯಸಾಧ್ಯತೆಯ ಅಧ್ಯಯನ ವರದಿಯನ್ನು ತಯಾರು ಮಾಡಲು ಹೈದರಾಬಾದ್ ಮೂಲದ ಕಂಪನಿಗೆ ಟೆಂಡರ್ ನೀಡಿದ್ದು ,ಈ ವರ್ಷದ ಫೆಬ್ರವರಿಯಲ್ಲಿ ಬಿಎಂಆರ್‌ಸಿಎಲ್ 50 ಕಿ. ಮೀ. ಮಾರ್ಗದಲ್ಲಿ ನಮ್ಮ ಮೆಟ್ರೋ ಯೋಜನೆ ವಿಸ್ತರಣೆ ಮತ್ತು 68 ಕಿ. ಮೀ. ನೂತನ ಮಾರ್ಗ ನಿರ್ಮಾಣದ ಕುರಿತು ಕಾರ್ಯಸಾಧ್ಯತೆಯ ಅಧ್ಯಯನ ವರದಿಯನ್ನು ತಯಾರು ಮಾಡಲು ಟೆಂಡರ್ ಆಹ್ವಾನಿಸಿತ್ತು.

ಟೆಂಡರ್ ಈಗ ಅಂತಿಮಗೊಳಿಸಲಾಗಿದ್ದು , ಬಿಎಂಆರ್‌ಸಿಎಲ್ ( BMRCL ) ವರದಿ ಪ್ರಕಾರ ವಿಸ್ತರಿತ ಮಾರ್ಗದಲ್ಲಿ ಚಲ್ಲಘಟ್ಟ-ಬಿಡದಿ 15 ಕಿ. ಮೀ. ಸಿಲ್ಕ್ ಇನ್ಸಿಟಿಟ್ಯೂಟ್-ಹಾರೋಹಳ್ಳಿ 24 ಕಿ. ಮೀ. ಬೊಮ್ಮಸಂದ್ರ-ಅತ್ತಿಬೆಲೆ 11 ಕಿ. ಮೀ ಮಾರ್ಗವಿದೆ.

ಕಾಳೇನ ಅಗ್ರಹಾರ-ಕಾಡುಗೋಡಿ ಟ್ರೀ ಪಾರ್ಕ್ ವಯಾ ಜಿಗಣಿ, ಅನೇಕಲ್, ಅತ್ತಿಬೆಲೆ, ಸರ್ಜಾಪುರ ಮತ್ತು ವರ್ತೂರು (52.41 ಕಿ. ಮೀ.) ಹೊಸ ಮಾರ್ಗ ಕೂಡ ಸೇರಿದೆ. ಯಾವುದೇ ಯೋಜನೆಯ ಮೇಲೆ ಹೂಡಿಕೆ ಮಾಡುವ ಮೊದಲು ಕಾರ್ಯಸಾಧ್ಯತೆಯ ಅಧ್ಯಯನ ವರದಿಯನ್ನು ತಯಾರು ಮಾಡಲಾಗುತ್ತದೆ. ಯೋಜನೆಯ ಪ್ರಾಥಮಿಕ ಅಧ್ಯಯನ, ತಾಂತ್ರಿಕ, ಸಾಮಾಜಿಕ, ಆರ್ಥಿಕ ಮುಂತಾದ ಅಂಶಗಳು ಈ ವರದಿಯಲ್ಲಿ ಸೇರಿರುತ್ತವೆ.

ಬಿಡದಿಗೆ ನಮ್ಮ ಮೆಟ್ರೋ ಯೋಜನೆ ವಿಸ್ತರಣೆ ಮಾಡಲು ಒಪ್ಪಿಗೆ ನೀಡುವ ಸಾಧ್ಯತೆ ಇದ್ದು ,ಒಪ್ಪಿಗೆ ಸಿಕ್ಕಿದರೆ ಬಿಎಂಆರ್‌ಸಿಎಲ್ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರು ಮಾಡಲು ಪ್ರತ್ಯೇಕ ಟೆಂಡರ್ ಕರೆಯಲಿದೆ.

ಬಿಡದಿಯನ್ನು ಕೈಗಾರಿಕಾ ಹಬ್ ಆಗಿ ಪರಿವರ್ತನೆ ಮಾಡಿ ಬೆಂಗಳೂರು ನಗರದ ಮೇಲಿರುವ ಒತ್ತಡ ಕಡಿಮೆ ಮಾಡಲು ಮುಂದಾಗಿದ್ದು ,ಇದೇ ಮಾದರಿಯಲ್ಲಿ ಬಿಎಂಆರ್‌ಸಿಎಲ್ ಸಹ ಹೊರ ವಲಯಕ್ಕೆ ಮೆಟ್ರೋ ಸಂಪರ್ಕ ವಿಸ್ತರಣೆ ಮಾಡುವ ಚಿಂತನೆ ನಡೆಸುತ್ತಿದೆ.ಮಹಿಳಾ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ

ಬಿಡದಿಯಲ್ಲಿ ಬೃಹತ್ ಕೈಗಾರಿಕಾ ಪ್ರದೇಶವಿರುವುದರಿಂದ ಬೆಂಗಳೂರು ನಗರದಿಂದ ಪ್ರತಿನಿತ್ಯ ಸಾವಿರಾರು ಜನರು ಬಿಡದಿಗೆ ಪ್ರಯಾಣಿಸುತ್ತಾರೆ.ಸಾವಿರಾರು ಸಂಖ್ಯೆಯ ನೌಕರರು ಇಲ್ಲಿ ಕೆಲಸ ಮಾಡುತ್ತಿದ್ದು, ಈ ಮಾರ್ಗ ಸಿದ್ದವಾದರೆ ಬೆಂಗಳೂರಿನಿಂದ ಪ್ರತಿದಿನ ಸಂಚಾರ ನಡೆಸುವ ಜನರ ಅನುಕೂಲವಾಗಲಿದೆ.

Copyright © All rights reserved Newsnap | Newsever by AF themes.
error: Content is protected !!