ಮೈಸೂರಿನಲ್ಲಿ ನಮೋ ಯೋಗ: 15 ಸಾವಿರ ಯೋಗಪಟುಗಳ ಜತೆ ಮೋದಿ

Team Newsnap
1 Min Read

ಅಂತರ್ ರಾಷ್ಟ್ರೀಯ ಯೋಗ ದಿನದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯೋಗ ದಿನಾಚರಣೆ ಚಾಲನೆ ಸಿಕ್ಕಿದೆ. ಅರಮನೆ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ಅರಂಭವಾಗಿದೆ ಮಂಗಳವಾರ ಬೆಳಗ್ಗೆ 7 ಗಂಟೆಗೆ ಆರಂಭವಾದ ಯೋಗ ಪ್ರದರ್ಶನ 7.45ರವರೆಗೂ ನಡೆಯಲಿದೆ.

WhatsApp Image 2022 06 21 at 7.47.43 AM 1

ಪ್ರಧಾನಿ ಮೋದಿ ಅವರೊಂದಿಗೆ 15 ಸಾವಿರ ಜನ ಯೋಗ ಮಾಡುತ್ತಿದರು ಇದರಲ್ಲಿ 1200 ಶಾಲಾ ಮಕ್ಕಳು ಭಾಗವಹಿಸಿದ್ದಾರೆ. 45 ನಿಮಿಷ ನಡೆಯುವ ಯೋಗ ಕಾರ್ಯಕ್ರಮದಲ್ಲಿ 19 ಆಸನಗಳು ಪ್ರದರ್ಶನ ಮಾಡಲಾಯಿತು.

ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಬಸವರಾಜ ಬೊಮ್ಮಾಯಿ, ಮೈಸೂರು ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್​, ಪ್ರಮೋದಾದೇವಿ ಒಡೆಯರ್​, ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ. ಸೋಮಶೇಖರ್​, ಸಂಸದ ಪ್ರತಾಪ್​ ಸಿಂಹ ಸೇರಿದಂತೆ ಹಲವು ಗಣ್ಯರು ಮೋದಿ ಅವರ ಜತೆಗೆ ಯೋಗ ಮಾಡಿದರು ಇದಕ್ಕೂ ಮುನ್ನ 20 ನಿಮಿಷ ಕಾಲ ಪ್ರಧಾನಿ ನರೇಂದ್ರ ಮೋದಿ ಯೋಗ ಸಂದೇಶ ನೀಡಿದರು.

ಯೋಗ ಆರಂಭವಾದ ಮೊದಲ ಒಂದು ನಿಮಿಷ ಪ್ರಾರ್ಥನೆ, 4 ನಿಮಿಷ ಚಲನಕ್ರಿಯೆ, 25 ನಿಮಿಷ ತಾಡಾಸನ, ವೃಕ್ಷಾಸನ, ಪಾದಹಸ್ತಾಸನ-1, ಪಾದಹಸ್ತಾಸನ-2, ಅರ್ಧಚಕ್ರಾಸನ, ತ್ರಿಕೋನಾಸನ, ಸಮದಂಡಾಸನ, ಭದ್ರಾಸನ, ವಜ್ರಾಸನ, ಅರ್ಧಉಷ್ಟ್ರಾಸನ, ಉಷ್ಟ್ರಾಸನ, ಶಶಂಕಾಸನ, ಉತ್ಥಾನ ಮಂಡೂಕಾಸನ, ವಕ್ರಾಸನ, ಮಕರಾಸನ, ಸರಳ ಭುಜಂಗಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಪವನಮುಕ್ತಾಸನ, ಶವಾಸನ ಪ್ರದರ್ಶನ ನಡೆಯಲಿವೆ. ಬಳಿಕ 14 ನಿಮಿಷ ಪ್ರಾಣಾಯಾಮ, ಧ್ಯಾನ, ಸಂಕಲ್ಪ ಹಾಗೂ ಒಂದು ನಿಮಿಷ ಶಾಂತಿಮಂತ್ರ, ಎರಡು ನಿಮಿಷ ಸಂಕಲ್ಪ ಇರಲಿದೆ.

Share This Article
Leave a comment