ಬೆಂಗಳೂರು: ಶೀಘ್ರದಲ್ಲೇ KMF (ಕರ್ನಾಟಕ ಮಿಲ್ಕ್ ಫೆಡರೇಶನ್) ನಂದಿನಿ ಬ್ರ್ಯಾಂಡ್ ಅಡಿಯಲ್ಲಿ ದೋಸೆ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ.
ಈಗಾಗಲೇ KMF ತನ್ನ ಹಾಲು ಮತ್ತು ಹಾಲಿನ ಉತ್ಪನ್ನಗಳಿಂದ ಜನಪ್ರಿಯವಾಗಿದೆ. ಇದೀಗ ‘ನಂದಿನಿ’ ಬ್ರ್ಯಾಂಡ್ ಅಡಿಯಲ್ಲಿ ದೋಸೆ ಹಿಟ್ಟು ಪರಿಚಯಿಸಲು ಸಿದ್ಧತೆ ನಡೆಸುತ್ತಿದೆ, ಪ್ರಾಥಮಿಕವಾಗಿ ಬೆಂಗಳೂರಿನ ಮಾರುಕಟ್ಟೆಯನ್ನು ಲಕ್ಷ್ಯ ಮಾಡಲಾಗಿದೆ.
‘ರೆಡಿ ಟು ಕುಕ್’ ಪರಿಕಲ್ಪನೆಯಡಿ, ಜನರು ಸುಲಭವಾಗಿ ಮತ್ತು ಕಡಿಮೆ ಸಮಯದಲ್ಲಿ ಮನೆಯಲ್ಲೇ ರುಚಿಕರ ದೋಸೆ ತಯಾರಿಸಲು ಈ ನಂದಿನಿ ದೋಸೆ ಹಿಟ್ಟು ಸಹಕಾರಿಯಾಗಲಿದೆ. ಆರಂಭದಲ್ಲಿ 1 ಕೆಜಿ ಮತ್ತು 2 ಕೆಜಿ ಪ್ಯಾಕೆಟ್‌ಗಳಲ್ಲಿ ಈ ದೋಸೆ ಹಿಟ್ಟು ಪ್ರಾಯೋಗಿಕವಾಗಿ ಬಿಡುಗಡೆಯಾಗುವ ಸಾಧ್ಯತೆ ಇದೆ.ಇದನ್ನು ಓದಿ –ಹುಬ್ಬಳ್ಳಿ ಬೈಪಾಸ್‌ನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಈ ಯೋಜನೆಗಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ದೋಸೆ ಹಿಟ್ಟು ಮಾರುಕಟ್ಟೆಗೆ ಲಭ್ಯವಾಗಲಿದೆ.
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ