ನಂದಿನಿ ಹಾಲಿನ ದರ ಹೆಚ್ಚಳ – ಸಿಎಂ ಸಿದ್ದರಾಮಯ್ಯ

Team Newsnap
1 Min Read

ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಸುಳಿವನ್ನು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾಲಿನ ದರ ಏರಿಕೆ ಮಾಡುತ್ತೇವೆ. ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗಬೇಕು ಎಂದರು.

ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡುತ್ತೇವೆ. ಏರಿಕೆ ಮಾಡಿದ ಹಣ ಸಂಪೂರ್ಣ ರೈತರಿಗೆ ಹೋಗಬೇಕು ಎಂದರು. ಹಾಲಿಗೆ 5.೦೦ ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು..

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (KMF) ನಂದಿನಿ ಹಾಲಿನ ದರವನ್ನು ಜೂನ್‌ 25 ರಂದು ಏರಿಕೆ ಮಾಡಿತ್ತು. ಪ್ರತಿ ಲೀಟರ್‌ ಹಾಲಿನ ದರ 2 ರೂ. ಹೆಚ್ಚಿಸಿತ್ತು.ಪ್ರತಿ ಲೀಟರ್‌ ಪ್ಯಾಕೆಟ್‌ ಹಾಲಿನ ದರವನ್ನ 2 ರೂ. ಹಾಗೂ ಅರ್ಧ ಲೀಟರ್‌ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿತ್ತು.

Share This Article
Leave a comment